ದಾವಣಗೆರೆ/ಶಿವಮೊಗ್ಗ: ಜಿಲ್ಲೆಯ ನ್ಯಾಮತಿ ತಾಲೂಕಿನ ಚಿನ್ನಿಕಟ್ಟಿ ಶಿವಪುರ ರಾಜ್ಯ ಹೆದ್ದಾರಿಯಲ್ಲಿ ಕೆಎಸ್ ಆರ್ ಟಿಸಿ ಮತ್ತು ಓಮಿನಿ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಮೂವರು ದಾರುಣ ಸಾವಿಗೀಡಾಗಿರುವ ಘಟನೆ ನಡೆದಿದೆ. ಶಿವಮೊಗ್ಗದ ಹರಮಘಟ್ಟ ಗ್ರಾಮದ ನಿವಾಸಿಗಳಾದ ನಂಜುಂಡಪ್ಪ(83), ರಾಕೇಶ್(27), ದೇವರಾಜ್(30) ಮೃತ ದುರ್ದೈವಿಗಳಾಗಿದ್ದಾರೆ.
ಘಟನೆಯಲ್ಲಿ ಒಂದು ಮಗು ಸೇರಿದಂತೆ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.
ಬಸ್-ಕಾರು ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಕಾರು ಗುರುತು ಸಿಗದಂತೆ ಆಗಿ ಹೋಗಿದೆ. ಡಿಕ್ಕಿ ರಭಸಕ್ಕೆ ಕಾರಿನಲ್ಲಿ ಸಿಲುಕಿದ್ದ ಮೂವರು ಚೆಲ್ಲಾಪಿಲ್ಲಿಯಾಗಿದ್ದು, ಬಸ್ಸಿನ ಮುಂಭಾಗವು ಛಿದ್ರಗೊಂಡಿದೆ.
ಘಟನಾ ಸ್ಥಳಕ್ಕೆ ಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನ್ಯಾಮತಿ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296