ತುಮಕೂರು: ಖಾಸಗಿ ಬಸ್ ಡಿಕ್ಕಿ ಹೊಡೆದ ಪರಿಣಾಮ ತಾಯಿ ಮಗಳು ಸ್ಥಳದಲ್ಲಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕು ರಾಮಶೆಟ್ಟಿಹಳ್ಳಿ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 206 ಅಂಡರ್ ಪಾಸ್ ಬಳಿ ನಡೆದಿದೆ.
ಮಗಳು ವೀಣಾ(16) ಮತ್ತು ಆಕೆಯ ತಾಯಿ ಕಮಲಮ್ಮ (42) ಮೃತ ಮಹಿಳೆಯಾಗಿದ್ದಾರೆ
ಇಂದು ಬೆಳಿಗ್ಗೆ 9 ಗಂಟೆ ವೇಳೆಯಲ್ಲಿ ಮಗಳನ್ನು ಶಾಲೆಗೆ ಬಿಡಲು ಹೋಗುವಾಗ ಹಿಂಬದಿಯಿಂದ ಬಂದ ಗೀತಾಂಜನೇಯ ಗಾರ್ಮೆಂಟ್ಸ್ ಹೆಸರಿನ ಬಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಪಾದಚಾರಿ ತಲೆಗೆ ತೀವ್ರ ಪೆಟ್ಟು ಬಿದ್ದಿದ್ದು ಹೆಚ್ಚಿನ ಚಿಕಿತ್ಸೆಗಾಗಿ ತಿಪಟೂರು ಆಸ್ಪತ್ರೆಗೆ ಕಳುಹಿಸಲಾಗಿದೆ. ಘಟನೆ ಸಂಬಂಧ ತಿಪಟೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಬೇಕೆಂದು ಆಗ್ರಹಿಸಿ ಸ್ಥಳದಲ್ಲಿದ್ದವರು ಪ್ರತಿಭಟನೆ ನಡೆಸಿದರು. ಈ ನಡುವೆ ಪೊಲೀಸರು ಹಾಗೂ ಗ್ರಾಮಸ್ಥರ ನಡುವೆ ತಳ್ಳಾಟ ನೂಕಾಟ ನಡೆಯಿತು.
ಹಿಂದೆ ಹಲವಾರು ಬಾರಿ ಈ ಭಾಗದ ಗ್ರಾಮಸ್ಥರು ಅಂಡರ್ ಪಾಸ್ ಬೇಕೆಂದು ಹೋರಾಟ ನಡೆಸಿದ್ದು ಸುಮಾರು 5 ಜನರು ಇಲ್ಲಿನ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಹುಚ್ಚನಹಟ್ಟಿ ರಾಮಶೆಟ್ಟಿಹಳ್ಳಿ ದೊಡ್ಡ ಮಾರ್ಪನಹಳ್ಳಿ ಹಿಡೇನಹಳ್ಳಿ ಗ್ರಾಮಸ್ಥರು ಬಾಕಿ ಅಂಡರ್ ಪಾಸ್ ಬೇಕೆಂದು ದಿನದಿಂದ ಹೋರಾಟ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q