ಬಾಗಲಕೋಟೆ: ಕೆಎಸ್ ಆರ್ ಟಿಸಿ ಬಸ್ ನಿಯಂತ್ರಣ ತಪ್ಪಿದ ಪರಿಣಾಮ ಗಂಡ ಮತ್ತು ಮಗುವಿನೊಂದಿಗೆ ದೇವಸ್ಥಾನಕ್ಕೆ ಹೋಗ್ತಿದ್ದ ಮಹಿಳೆ ಮೃತಪಟ್ಟ ದುರ್ಘಟನೆ ಜಿಲ್ಲೆಯ ಬಾದಾಮಿ ಪಟ್ಟಣದ ಹೊರವಲಯದಲ್ಲಿ ಘಟನೆ ನಡೆದಿದೆ.
ಬಸ್ ಪಾಟಾ ಕಟ್ ಆದ ಪರಿಣಾಮ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಹೋಗ್ತಿದ್ದ ವೆಂಕುಬಾಯಿ ಚವ್ಹಾಣ್ (35) ಎಂಬ ಮಹಿಳೆ ಅಪಘಾತಕ್ಕೆ ಬಲಿಯಾಗಿದ್ದಾರೆ. ಬಾದಾಮಿಯಿಂದ ಕೆರೂರು ಕಡೆಗೆ ಹೋಗುತ್ತಿತ್ತು.
ಮೃತ ವೆಂಕುಬಾಯಿ ತನ್ನ ಗಂಡ ಹಾಗೂ ಮಗುವಿನೊಂದಿಗೆ ಕರೆಮ್ಮ ದೇವಸ್ಥಾನಕ್ಕೆ ಹೋಗ್ತಿದ್ದಾಗ ಡಿಕ್ಕಿಯಾಗಿದೆ. ಅದೃಷ್ಟವಶಾತ್ ವೆಂಕುಬಾಯಿ ಗಂಡ ಹಾಗೂ ಮಗುವಿಗೆ ಯಾವುದೇ ಗಾಯಗಳಾಗಿಲ್ಲ. ಬಾದಾಮಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


