ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಹಿರಿಯೂರು ನಗರದಿಂದ ಹೊರವಲಯದಲ್ಲಿರುವ ಶಾಲಾ ಕಾಲೇಜಿನ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ಬುಧವಾರ ಹಿರಿಯೂರು ನಗರದ ಸಾರಿಗೆ ಸಂಸ್ಥೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳು ಬಸ್ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಶಾಲಾ-ಕಾಲೇಜು ಪ್ರಾರಂಭವಾಗಿ ತಿಂಗಳು ಕಳೆದರೂ ಗ್ರಾಮೀಣ ಪ್ರದೇಶಗಳ ವಿದ್ಯಾರ್ಥಿಗಳು ಪಟ್ಟಣ ಪ್ರದೇಶಗಳ ವಿದ್ಯಾಭ್ಯಾಸಕ್ಕೆ ತೆರಳಲು ಸಕಾಲಿಕ ಬಸ್ ವ್ಯವಸ್ಥೆ ಮಾಡಿಕೊಟ್ಟಿಲ್ಲ ಎಂದು ವಿದ್ಯಾರ್ಥಿಗಳು ಸಾರಿಗೆ ಸಂಸ್ಥೆ ಮತ್ತು ಸಾರಿಗೆ ಸಂಸ್ಥೆಯ ಆಡಳಿತ ಅಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿದರು.
ಚಿತ್ರದುರ್ಗ ಹಾಗೂ ಹಿರಿಯೂರು ನಗರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಸದಾಗಿ ನಿರ್ಮಾಣವಾಗಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಪ್ರಾರಂಭವಾಗಿದ್ದು, ಈ ಕಾಲೇಜು ಹಿರಿಯೂರು ನಗರದಿಂದ ಸುಮಾರು 7 ಕಿಲೋ ಮೀಟರ್ ದೂರದಲ್ಲಿದ್ದು, ಈ ವಿದ್ಯಾಸಂಸ್ಥೆಗೆ ಸುಮಾರು ಐದುನೂರಕ್ಕಿಂತಲೂ ಹೆಚ್ವು ವಿದ್ಯಾರ್ಥಿಗಳು ಬರುತ್ತಿದ್ದು , ಅದರಲ್ಲೂ ಸಹ ಅತಿ ಹೆಚ್ಚಾಗಿ ಹಿರಿಯೂರು ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮೀಣ ಭಾಗದಿಂದ ಹಾಗೂ ಚಿತ್ರದುರ್ಗದಿಂದಲೂ ಸಹ ವಿದ್ಯಾರ್ಥಿಗಳು ಅತಿ ಹೆಚ್ವಿನ ಸಂಖ್ಯೆಯಲ್ಲಿಕಾಲೇಜಿಗೆ ಬರುವ ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದಾರೆ. ಆದರೆ ಈ ಮಾರ್ಗವಾಗಿ ಸರ್ಕಾರವು ನಮಗೆ ಯಾವುದೇ ಬಸ್ ವ್ಯವಸ್ಥೆ ಕಲ್ಪಿಸಿಕೊಡದೆ ಇಂದಿನ ಸರ್ಕಾರವು ವಿದ್ಯಾರ್ಥಿಗಳ ಭವಿಷ್ಯದ ಜೊತೆಯಲ್ಲಿ ಆಟವಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇಲ್ಲಿ ಸರಿಯಾದ ಬಸ್ ನಿಲ್ದಾಣ ವ್ಯವಸ್ಥೆಯೇ ಇಲ್ಲ. ಮಾತ್ರವಲ್ಲದೇ ಬಸ್ ಪಾಸ್ ವ್ಯವಸ್ಥೆ ಕೂಡ ಮಾಡಿಕೊಟ್ಟಿಲ್ಲ. ಬಸ್ ನ ಸಂಪರ್ಕವಿಲ್ಲದ ಕಾರಣ ವಿದ್ಯಾರ್ಥಿಗಳು ಕಾಲೇಜಿಗೆ ಸರಿಯಾದ ಸಮಯಕ್ಕೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಕಾಲೇಜು ನಗರದಿಂದ ಹೊರವಲಯದಲ್ಲಿ ಇರುವುದರಿಂದ ವಿದ್ಯಾರ್ಥಿಗಳು ನಡೆದುಕೊಂಡು ಹೋಗುವುದಕ್ಕೆ ಹರಸಾಹಸ ಪಡುವಂತಹ ಪರಿಸ್ಥಿತಿಗಳು ಉಂಟಾಗಿದೆ ಎಂದು ಅಳಲು ತೋಡಿಕೊಂಡರು.
ಆದರಿಂದ ಸ್ಥಳೀಯ ಶಾಸಕರು ಹಾಗೂ ಸಾರಿಗೆ ಸಂಸ್ಥೆಯ ಸಚಿವರು ಈ ಬಗ್ಗೆ ಸೂಕ್ತ ಕ್ರಮಕೈಗೊಂಡು ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು. ಈ ಭಾಗಕ್ಕೆ ಬಸ್ ವ್ಯವಸ್ಥೆ ಹಾಗೂ ಬಸ್ ಪಾಸ್ ಮಾಡಲು ಅವಕಾಶ ನೀಡಬೇಕು ಎಂದು ಅವರು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಾರಿಗೆ ಸಂಸ್ಥೆಯ ಗಣಕಿಸಹಾಯಕರು , ಹಿರಿಯೂರು ನಗರ ಪೋಲಿಸ್ ಠಾಣೆಯ ಶ್ರೀನಿವಾಸ್ ಸೇರಿದಂತೆ ಇತರರು ಉಪಸ್ಥಿತರಿದ್ದರು.
ವರದಿ: ಮುರುಳಿಧರನ್ ಆರ್. ಚಿತ್ರದುರ್ಗ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz