ನವದೆಹಲಿ: ಭಾರತೀಯ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ಬಸ್ಸೊಂದು ನೇಪಾಳದ ತನಾಹುನ್ ಜಿಲ್ಲೆಯ ಮಾರ್ಸ್ಯಾಂಗ್ಡಿಯಲ್ಲಿ ನದಿಗೆ ಉರುಳಿದ್ದು, ಪರಿಣಾಮವಾಗಿ 14 ಜನ ಸಾವನ್ನಪ್ಪಿ, 16 ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಬಸ್ಸಿನಲ್ಲಿ ಒಟ್ಟು 40 ಜನರು ಪ್ರಯಾಣಿಸುತ್ತಿದ್ದರು. ಬಸ್ ಪೊಖಾರಾದಿಂದ ಕಠ್ಮಂಡುವಿಗೆ ಸಾಗುತ್ತಿತ್ತು. ಉತ್ತರ ಪ್ರದೇಶದ ಎಫ್ಟಿ 7623 ನಂಬರ್ ಪ್ಲೇಟ್ ಹೊಂದಿದ್ದ ಬಸ್ ದುರಂತಕ್ಕೀಡಾದ ಬಸ್ ಆಗಿದೆ ಅಂತ ತನಾಹುನ್ ಜಿಲ್ಲೆಯ ಡಿಎಸ್ಪಿ ದೀಪು ಕುಮಾರ್ ರಾಯ ತಿಳಿಸಿದ್ದಾರೆ.
ಭಾರತೀಯ ಪ್ರಯಾಣಿಕರು ಪೋಖಾರಾದ ಮಜೇರಿ ರೆಸಾರ್ಟ್ ನಲ್ಲಿ ತಂಗಿದ್ದರು. ಬಸ್ ಶುಕ್ರವಾರ ಬೆಳಿಗ್ಗೆ ಪೋಖಾರಾದಿಂದ ಕಠ್ಮಂಡುವಿಗೆ ಹೊರಟಿತು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q