ಬಸ್ ನಿಲ್ದಾಣದಲ್ಲಿ ನಿಂತಿದ್ದವರ ಮೇಲೆ ಟ್ರಕ್ ಹರಿದ ಪರಿಣಾಮ 6 ಮಂದಿ ಮೃತಪಟ್ಟು, 12 ಮಂದಿ ಗಾಯಗೊಂಡಿರುವ ಘಟನೆ ಮಧ್ಯಪ್ರದೇಶದ ರತ್ನಲಂ ಜಿಲ್ಲೆಯಲ್ಲಿ ಸಂಭವಿಸಿದೆ.
ರಟ್ಲಂ ಜಿಲ್ಲೆಗೆ 35 ಕಿ.,ಮೀ. ದೂರದ ಸತ್ರುದ್ರ ಬಳಿಯ ರಟ್ಲಂ ಲೆಬ್ಡ್ ರಸ್ತೆಯಲ್ಲಿ ಭಾನುವಾರ ಈ ದುರ್ಘಟನೆ ಸಂಭವಿಸಿದೆ. ಅಪಘಾತದಿಂದ ಸಂಚಾರಿ ದಟ್ಟಣೆ ಉಂಟಾಗಿದೆ.
ರಟ್ಲಂನಿಂದ ಬದ್ವಾರ್ ಗೆ ಹೋಗುತ್ತಿದ್ದ ಟ್ರಕ್ ಟಯರ್ ಸ್ಫೋಟಗೊಂಡ ಪರಿಣಾಮ ನಿಯಂತ್ರಣ ಕಳೆದುಕೊಂಡು ಬಸ್ ನಿಲ್ದಾಣದಲ್ಲಿ ನಿಂತಿದ್ದ ಜನರ ಮೇಲೆ ಹರಿದಿದೆ ಎಂದು ಹೇಳಲಾಗಿದೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy