ಪುಣೆ: ಕರ್ನಾಟಕ ಬಸ್ ಗಳಿಗೆ ಕಪ್ಪು ಮಸಿ ಬಳಿದು ಮರಾಠ ಮಹಾಸಂಘ ಪುಂಡಾಟ ಮೆರೆದ ಘಟನೆ ಪುಣೆಯಲ್ಲಿ ನಡೆದಿದೆ.
ಪುಣೆ ಜಿಲ್ಲೆಯ ದೌಂಡ್‌ನಲ್ಲಿ ನಿಪ್ಪಾಣಿ-ಔರಂಗಾಬಾದ್ ಬಸ್ ಗೆ ಜೈ ಮಹಾರಾಷ್ಟ್ರ ಮತ್ತು ಜಾಹಿರ್ ನಿಷೇಧ್ ಪದಗಳನ್ನು ಕಪ್ಪು ಬಣ್ಣದಲ್ಲಿ ಬರೆದು ತಮ್ಮ ಪುಂಡಾಟವನ್ನು ಮೆರೆದಿದ್ದಾರೆ.
ಗಡಿ ವಿವಾದ ಉಲ್ಬಣಗೊಳ್ಳುತ್ತಿದ್ದಂತೆ, ಮರಾಠ ಮಹಾಸಂಘವು ನವೆಂಬರ್ 25 ರಂದು ಪುಣೆಯಲ್ಲಿ ಕರ್ನಾಟಕ ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗೆ ವಿರುದ್ಧವಾಗಿ ಪ್ರತಿಭಟನೆ ನಡೆಸಿದೆ.
ಪ್ರತಿಭಟನೆಯ ಸಂಕೇತವಾಗಿ, ಮಹಾಸಂಘ ಪುಂಡರು ಪುಣೆಯಲ್ಲಿ ರಾಜ್ಯ ಮತ್ತು ಕರ್ನಾಟಕದ ನಡುವೆ ಸಂಚರಿಸುವ ಬಸ್ಸುಗಳ ಮೇಲೆ ಜೈ ಮಹಾರಾಷ್ಟ್ರ ಎಂದು ಬರೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


