ತುಮಕೂರು : ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೋರ್ವನ ಭೀಕರ ಕೊಲೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ತುಮಕೂರು ನಗರದ ಜಿಸಿಆರ್ ಕಾಲೋನಿಯ ಮುಬಾರಕ್ ಪಾಷಾ(35) ಎಂದು ಗುರುತಿಸಲಾಗಿದೆ.
ಈತ ಕಳೆದ ರಾತ್ರಿ ನಗರದ ಖಾಸಗಿ ಬಸ್ ನಿಲ್ದಾಣಕ್ಕೆ ಬಂದಿದ್ದನು ಎನ್ನಲಾಗಿದೆ. ಈ ವೇಳೆ ಯಾರೋ ಅಪರಿಚಿತರು ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಿದ್ದಾರೆ. ಕೊಲೆಯಾದ ವ್ಯಕ್ತಿ ನಗರದ ಗುಬ್ಬಿ ಗೇಟ್ ಬಳಿ ಹಮಾಲಿ ಕೆಲಸ ಮಾಡಿಕೊಂಡಿದ್ದನು. ಯಾರೊಂದಿಗೋ ಗಲಾಟೆ ಮಾಡಿಕೊಂಡು ಈತ ಕೊಲೆಯಾಗಿರುವ ಶಂಕೆ ಇದ್ದು. ಕೊಲೆಗೆ ನಿಖರ ಕಾರಣ ಪೊಲೀಸ್ ತನಿಖೆಯಿಂದಷ್ಟೇ ಗೊತ್ತಾಗಬೇಕಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ಭೇಟಿ ಪರಿಶೀಲನೆ ನಡೆಸಿದ್ದಾರೆ. ಮಾಹಿತಿ ತಿಳಿದು ಸ್ಥಳಕ್ಕೆ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪುರ್ವಾಡ್, ಡಿವೈಎಸ್ಪಿ ಶ್ರೀನಿವಾಸ್, ನಗರ ಠಾಣೆಯ ಸಿಬ್ಬಂದಿಗಳು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್ . ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy