ಅಂಗುಲ್: ಒಡಿಶಾದ ಅಂಗುಲ್ ಜಿಲ್ಲೆಯ ಗಹಾಮ್ ಬಳಿ ಭಾನುವಾರ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಒಡಿಶಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಅಂಗುಲ್‌ನಿಂದ ಬರಿಪಾಡಾಗೆ ತೆರಳುತ್ತಿದ್ದ ವೇಳೆ ರಸ್ತೆಯಿಂದ ಸ್ಕಿಡ್ ಆಗಿ ಪಲ್ಟಿಯಾಗಿದೆ. ಪರಿಣಾಮ ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 50 ರಿಂದ 60 ಮಂದಿಯ ಪೈಕಿ ಇಬ್ಬರು ಸಾವನ್ನಪ್ಪಿ, 30ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಪೊಲೀಸರು ಮತ್ತು ಸ್ಥಳೀಯರು ಜಂಟಿ ಕಾರ್ಯಾಚರಣೆ ನಡೆಸಿ ಗಂಭೀರವಾಗಿ ಗಾಯಗೊಂಡಿರುವ 30 ಕ್ಕೂ ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆ ಬಳಿಕ ಬಸ್ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4