ದಾವಣಗೆರೆ, ಆ.19: ಜಿಲ್ಲೆಯ ಜಗಳೂರು ತಾಲೂಕಿನ ದೊಣ್ಣೆಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ ೫೦ರಲ್ಲಿ ಖಾಸಗಿ ಬಸ್ ಪಲ್ಟಿಯಾಗಿ 2೦ ಮಂದಿ ಪ್ರಯಾಣಿಕರು ಗಾಯಗೊಂಡಿದ್ದಾರೆ.
ಅಪಘಾತದಲ್ಲಿ 2೦ಕ್ಕೂ ಹೆಚ್ಚು ಜನರಿಗೆ ಗಾಯಗೊಂಡಿದ್ದು, ಗಾಯಾಳುಗಳನ್ನು ಚಿಕಿತ್ಸೆಗೆ ದಾಖಲು ಮಾಡಲಾಗಿದೆ.
ಪ್ರಯಾಣಿಸುತ್ತಿದ್ದ 2೦ ಮಂದಿ ಪೈಕಿ ಐವರು ತೀವ್ರವಾಗಿ ಗಾಯಗೊಂಡಿದ್ದು, ಅವರ ಸ್ಥಿತಿ ಗಂಭೀರವಾಗಿದೆ ತಿಳಿದು ಬಂದಿದೆ.
ಇನ್ನೂ ಗಾಯಾಳುಗಳನ್ನು ಜಗಳೂರು ಹಾಗೂ ದಾವಣಗೆರೆ ಜಿಲ್ಲೆಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಘಟನಾ ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಖಾಸಗಿ ಬಸ್ ಬೆಂಗಳೂರಿನಿಂದ ಸಿಂಧಗಿಗೆ ತೆರಳುತ್ತಿದ್ದ ವೇಳೆಯಲ್ಲಿ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy