ಬೆಂಗಳೂರು: ಬಸ್ ಮತ್ತು ಬಸ್ ಸಿಬ್ಬಂದಿ ಮೇಲೆ ದಾಳಿ ನಡೆಸಿದ ನಂತರ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವಿನ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಸ್ಥಗಿತ ಮಾಡಲಾಗಿದೆ.
ನಿನ್ನೆಯಿಂದ ಮಹಾರಾಷ್ಟ್ರಕ್ಕೆ ಬಸ್ ಸೇವೆಗಳನ್ನು ಸ್ಥಗಿತಗೊಳಿಸಿದ್ದೇವೆ. ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮ ಸಹ ಕರ್ನಾಟಕಕ್ಕೆ ಬಸ್ಗಳ ಕಾರ್ಯಾಚರಣೆಯನ್ನು ನಿಲ್ಲಿಸಿದೆ” ಎಂದು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಡಿ ಜಿಲ್ಲೆ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ವಿವರಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4