ಬೀದರ್: ಹೆಚ್ಚುವರಿ ಬಸ್ ಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಸರ್ಕಾರಿ ಬಸ್ ನ ಫುಟ್ ಬೋರ್ಡ್ ನಲ್ಲಿ ನೇತಾಡುತ್ತಾ ಅಪಾಯಕಾರಿಯಾಗಿ ಪ್ರಯಾಣಿಸುತ್ತಿರುವ ದೃಶ್ಯ ಕಂಡು ಬಂದಿದೆ.
ಬೀದರ್ ಜಿಲ್ಲೆಯ ಔರಾದ್ ನಿಂದ ಭಾಲ್ಕಿಕಡೆಗೆ ತೆರಳುವ ಸರ್ಕಾರಿ ಬಸ್ ನಲ್ಲಿ ಈ ದೃಶ್ಯ ಕಂಡು ಬಂದಿದೆ. ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿತ್ತು. ವಿದ್ಯಾರ್ಥಿಗಳು ಬಸ್ ನಿಂದ ಬಿದ್ದು ಅನಾಹುತ ಸಂಭವಿಸಿದರೆ ಹೊಣೆ ಯಾರೂ ಎನ್ನುವ ಪ್ರಶ್ನೆಗಳು ಕೇಳಿ ಬಂದಿವೆ.
ಕಲ್ಯಾಣ ಕರ್ನಾಟಕ ಸಾರಿಗೆ KA 38, F1239 ಸಂಖ್ಯೆಯ ಬಸ್ ನಲ್ಲಿ ವಿದ್ಯಾರ್ಥಿಗಳು ಫುಟ್ ಬೋರ್ಡ್ ನಲ್ಲೇ ನೇತಾಡುತ್ತಾ ಪ್ರಯಾಣಿಸುತ್ತಿದ್ದಾರೆ. ಶಾಲಾ ಸಮಯದಲ್ಲಿ ಬಸ್ ಗಳ ಕೊರತೆಯಿಂದಾಗಿ ವಿದ್ಯಾರ್ಥಿಗಳು ಸಿಕ್ಕಿದ ಬಸ್ ನಲ್ಲೇ ನೇತಾಡಿಕೊಂಡು ಪ್ರಯಾಣಿಸುವ ದುಸ್ಥಿತಿ ಕಂಡು ಬಂದಿದೆ.
ವಿದ್ಯಾರ್ಥಿಗಳ ಸುರಕ್ಷತೆಗೆ ರಾಜ್ಯ ಸರ್ಕಾರ ಹಲವಾರು ಯೋಜನೆಗಳನ್ನು ತಂದಿದೆ. ಆದರೆ ವಿದ್ಯಾರ್ಥಿಗಳಿಗೆ ಶಾಲೆಗೆ ತೆರಳಲು ಸುರಕ್ಷಿತ ವ್ಯವಸ್ಥೆಯೇ ಇಲ್ಲದಿರುವುದು ದುರಂತವೇ ಸರಿ, ಸಂಬಂಧಪಟ್ಟವರು ಇನ್ನಾದರೂ ಎಚ್ಚೆತ್ತುಕೊಂಡು ಈ ಬಗ್ಗೆ ಪರಿಶೀಲಿಸಿ ಕ್ರಮಕೈಗೊಳ್ಳುತ್ತಾರಾ ಎನ್ನುವುದನ್ನು ಕಾದು ನೋಡ ಬೇಕಿದೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC



