nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026
    Facebook Twitter Instagram
    ಟ್ರೆಂಡಿಂಗ್
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    • ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್
    • ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ
    • ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ
    • ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
    • ನಕಲಿ ಔಷಧ ದಂಧೆಯ ಕಿಂಗ್‌ ಪಿನ್ ಪ್ರಶಾಂತ್ ರಂಜನ್ ಬಾಬು ಅರೆಸ್ಟ್!
    • ಬೀದರ್: ಚಾಂದೋರಿ ಪಂಚಾಯತ್‌ ನಲ್ಲಿ 48.92 ಲಕ್ಷ ರೂ. ಅಕ್ರಮ ವರ್ಗಾವಣೆ ಹಗರಣ; ತೆರಿಗೆ ಸಂಗ್ರಾಹಕ ಬಂಧನ, ಸಚಿವರಿಂದ ತನಿಖೆಗೆ ಆದೇಶ
    • ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಸ್ ಸೌಕರ್ಯ ಹೆಚ್ಚಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ
    ತುಮಕೂರು February 16, 2022

    ಬಸ್ ಸೌಕರ್ಯ ಹೆಚ್ಚಿಸಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಮನವಿ

    By adminFebruary 16, 2022No Comments2 Mins Read
    ksrtc

    ತುಮಕೂರು: ಜಿಲ್ಲೆಯ ಗುಬ್ಬಿ, ಕೊರಟಗೆರೆ ಮತ್ತು ಚಿಕ್ಕನಾಯಕನಹಳ್ಳಿಯಲ್ಲಿ ರಾಜ್ಯ ರಸ್ತೆ ಸಾರಿಗೆ ಬಸ್ ಘಟಕ ಪ್ರಾರಂಭಿಸಬೇಕು, ವಿದ್ಯಾರ್ಥಿಗಳಿಗಾಗುತ್ತಿರುವ ತೊಂದರೆಯನ್ನು ನಿವಾರಿಸಬೇಕು ಮತ್ತು ಗ್ರಾಮಾಂತರದ ವಿವಿಧ ಭಾಗಗಳಿಗೆ ಬಸ್ ಸೌಕರ್ಯ ಹೆಚ್ಚಿಸುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ತುಮಕೂರು ವಿಭಾಗೀಯ ನಿಯಂತ್ರಣಾಧಿಕಾರಿಗಳನ್ನು ಕೆಪಿಸಿಸಿ ಮಾಧ್ಯಮ ವಿಶ್ಲೇಷಕರು ಹಾಗೂ ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷರಾದ ಮುರಳೀಧರ ಹಾಲಪ್ಪ ಅವರು ಒತ್ತಾಯಿಸಿದರು.

    ನಗರದ ಅಂತರಸನಹಳ್ಳಿಯಲ್ಲಿರುವ ಸಾರಿಗೆ ನಿಯಂತ್ರಣಾಧಿಕಾರಿಗಳ ಕಚೇರಿಗೆ ಚಿಕ್ಕನಾಯಕನಹಳ್ಳಿ, ಗುಬ್ಬಿ, ಕೊರಟಗೆರೆ ಮತ್ತು ತುಮಕೂರು ನಗರದ ಕಾಂಗ್ರೆಸ್ ಮುಖಂಡರೊoದಿಗೆ ನಿಯೋಗದಲ್ಲಿ ತೆರಳಿ ಕ.ರಾ.ರ.ಸಾ.ನಿ.ದ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಆರ್.ಬಸವರಾಜು ಅವರೊಂದಿಗೆ ಸಮಸ್ಯೆಗಳ ಕುರಿತು ಸಮಾಲೋಚನೆ ನಡೆಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಮುರಳೀಧರ ಹಾಲಪ್ಪ ಅವರು ಗುಬ್ಬಿ, ಚಿಕ್ಕನಾಯಕನಹಳ್ಳಿ, ಕೊರಟಗೆರೆ ತಾಲ್ಲೂಕುಗಳಲ್ಲಿ ಬಸ್ ಡಿಪೋ ಪ್ರಾರಂಭಿಸುವುದರಿoದ ಅಲ್ಲಿನ ಸ್ಥಳೀಯರಿಗೆ ಉದ್ಯೋಗದ ಜೊತೆಗೆ ಆ ಭಾಗದ ಪ್ರಯಾಣಿಕರಿಗೆ, ವಿದ್ಯಾರ್ಥಿಗಳಿಗೆ ತೊಂದರೆ ನಿವಾರಿಸಿದಂತಾಗುತ್ತದೆ. ಆದುದರಿಂದ ಶೀಘ್ರವಾಗಿ ಬಸ್ ಡಿಪೋ ಪ್ರಾರಂಭಿಸಬೇಕೆoದು ಮನವಿ ಮಾಡಿದರು.

    ಇದಕ್ಕೆ ಉತ್ತರಿಸಿದ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಅರ್.ಬಸವರಾಜು ಚಿಕ್ಕನಾಯಕನಹಳ್ಳಿಯಲ್ಲಿ ಘಟಕ ಆರಂಭಿಸಲು ಇಂದು ಭೂಮಿ ಹಸ್ತಾಂತರ ಕಾರ್ಯಕ್ರಮವಿದೆ, ಹಾಗೆಯೇ ಗುಬ್ಬಿಯಲ್ಲೂ ಸಹ ಈಗಾಗಲೇ ಭೂಮಿಯನ್ನು ಖರೀದಿಸಲಾಗಿದೆ. ಶೀಘ್ರದಲ್ಲೇ ಘಟಕ ನಿರ್ಮಾಣಕ್ಕೆ ಚಾಲನೆ ದೊರೆಯಲಿದೆ ಎಂದರು. ಜೊತೆಗೆ ಕೊರಟಗೆರೆಯಲ್ಲೂ ಸಹ ಘಟಕ ನಿರ್ಮಾಣಕ್ಕೆ ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುತ್ತಿದೆ ಎಂದು ತಿಳಿಸಿದರು.

    ನಂತರ ಮಾತನಾಡಿದ ಮುರಳೀಧರ ಹಾಲಪ್ಪ, ಬೆಳಿಗ್ಗೆ ಮತ್ತು ಸಂಜೆ ವಿದ್ಯಾರ್ಥಿ ಮತ್ತು ನೌಕರರು ಪ್ರಯಾಣಿಸುವ ಸಂದರ್ಭದಲ್ಲಿ ಜನಸಂದಣೆ ಹೆಚ್ಚಾಗಿದ್ದು,  ಶಾಲಾ ಸಮಯದಲ್ಲಿ ವಿದ್ಯಾರ್ಥಿಗಳ ಪ್ರಯಾಣಕ್ಕೆ ತುಂಬಾ ತೊಂದರೆಯಾಗುತ್ತಿದೆ. ಬೆಳಿಗ್ಗೆ 9ರಿಂದ 11ಗಂಟೆ ಮತ್ತು ಸಂಜೆ 4 ರಿಂದ 6 ಗಂಟೆವರೆಗೆ ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶಕ್ಕೆ, ತುಮಕೂರಿನಿಂದ ಎಲ್ಲಾ ತಾಲ್ಲೂಕುಗಳಿಗೆ ಹಾಗೂ ಎಲ್ಲಾ ತಾಲ್ಲೂಕುಗಳಿಂದ ತುಮಕೂರಿಗೆ ಪ್ರತಿ 5-10 ನಿಮಿಷಕ್ಕೊಮ್ಮೆ ಬಸ್‌ ಗಳ ಸೇವೆಯನ್ನು ಒದಗಿಸುವಂತೆ ಮನವಿ ಮಾಡಿದರು.

    ಶಾಲ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳಿಗೆ ತೊಂದರೆಯಾಗದoತೆ ಬಸ್ ನಿಲ್ಲಿಸಿ ವಿದ್ಯಾರ್ಥಿಗಳನ್ನು ಹತ್ತಿಸಿಕೊಂಡು ಅವರಿಗೆ ಗೌರವ ಕೊಡುವಂತಹ ಕೆಲಸ ಬಸ್‌ ನ ಚಾಲಕ ಮತ್ತು ನಿರ್ವಾಹಕರು ಮಾಡಬೇಕು ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕೆಂದು ಹೇಳಿದರು.

    ವಿದ್ಯಾರ್ಥಿಗಳ ಬಸ್‌ಪಾಸ್ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕು, ಹಾಗೂ ಕಾಲೇಜಿನಲ್ಲಿಯೇ ಪಾಸ್ ವಿತರಣೆಗೆ ಕ್ರಮ ಕೈಗೊಳ್ಳಬೇಕು, ಸರ್ಕಾರದಿಂದ ಉಚಿತ ವಿದ್ಯಾರ್ಥಿ ಬಸ್‌ಪಾಸ್ ನೀಡಲು ಹಾಗೂ ಸದರಿ ಮೊತ್ತವನ್ನು ಸರ್ಕಾರದಿಂದ ಭರಿಸಿಕೊಳ್ಳಲು ಅಗತ್ಯ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.

    ಚಿಕ್ಕನಾಯಕನಹಳ್ಳಿಯಲ್ಲಿಯ ಜನರಿಗೆ ಮುಂಜಾನೆ ಮತ್ತು ರಾತ್ರಿ ವೇಳೆ ಬಸ್‌ನ ಸಮಸ್ಯೆ ಇದ್ದು, ಚಿಕ್ಕನಾಯಕನಹಳ್ಳಿಯಲ್ಲಿ ರಾತ್ರಿ ಬಸ್ ನಿಲುಗಡೆಯಾಗಿ ಮುಂಜಾನೆ ತುಮಕೂರು ಹಾಗೂ ಇತರೆ ನಗರಗಳಿಗೆ ಹೊರಡುವಂತೆ ಬಸ್ ಸೇವೆ ಒದಗಿಸಲು ಸೂಕ್ತ ಕ್ರಮಕೈಗೊಳ್ಳಬೇಕೆಂದರು.

    ಮಧುಗಿರಿಯಲ್ಲಿ ವಿಭಾಗೀಯ ಕಛೇರಿ ಪ್ರಾರಂಭಿಸಲು ಈಗಿನಿಂದಲೇ ಅಡಿಪಾಯ ಹಾಕಲು ಅಗತ್ಯ ಕ್ರಮ ಕೈಗೊಳ್ಳಬೇಕು ಹಾಗೂ ವಜಾಗೊಂಡ ಸಿಬ್ಬಂದಿಗಳ ನೇಮಕ ಹಾಗೂ ತುಮಕೂರು ವಿಭಾಗದ ನೌಕರರ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು.

    ಈ ವೇಳೆ ಮಾತನಾಡಿದ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ಆರ್.ಬಸವರಾಜು ಮಧುಗಿರಿಯಲ್ಲಿ ವಿಭಾಗೀಯ ಕಚೇರಿ ಸರ್ಕಾರದ ಮಟ್ಟದಲ್ಲಿ ಆಗಬೇಕಿದೆ ಎಂದು ತಿಳಿಸಿದರು. ಜೊತೆಗೆ ವಿದ್ಯಾರ್ಥಿಗಳಿಗೆ ಮತ್ತು ಪ್ರಯಾಣಿಕರಿಗೆ ಯವುದೇ ರೀತಿ ತೊಂದರೆಯಾಗದoತೆ ಕ್ರಮ ವಹಿಸಲಾಗುವುದು. ಬಸ್ ಪಾಸ್ ವಿತರಣೆಗೂ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು. 

    ಚಿಕ್ಕನಾಯಕನಹಳ್ಳಿಯ ಮುಖಂಡರಾದ ಡಾ.ಪರಮೇಶ್ವರಪ್ಪ ಮಾತನಾಡಿ, ಹೊಸದುರ್ಗ-ಬೆಂಗಳೂರು ಮಾರ್ಗವಾಗಿ ರಾತ್ರಿವೇಳೆ ಬಸ್‌ಗಳ ಕೊರತೆ ಹೆಚ್ಚಾಗಿದೆ, ಆದ್ದರಿಂದ ಹೆಚ್ಚುವರಿ ಬಸ್ ವ್ಯವಸ್ಥೆ ಮಾಡಬೇಕೆಂದು ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಗುಬ್ಬಿ ತಾಲ್ಲೂಕು ನಿಟ್ಟೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಯಣ್ಣ, ಶಂಕರಾನoದ್, ವಸಂತಮ್ಮ, ಭರತಗೌಡ, ಗಂಗಾಧರ್, ಪುರುಷೋತ್ತಮ್ ಬಾಬು, ಚಿಕ್ಕನಾಯಕನಹಳ್ಳಿಯ ಡಾ.ಪರಮೇಶ್, ಕಿರಣ್, ತುಮಕೂರು ಗ್ರಾಮಾಂತರದ ಯದುಕುಮಾರ್, ಗ್ರಾಪಂ ಸದಸ್ಯರು, ನವೀನ್, ಚಂದ್ರಕಲಾ, ಮಾಜಿ ಎಪಿಎಂಸಿ ಸದಸ್ಯರು, ಮುಖಂಡರುಗಳಾದ ರೇವಣ್ಣಸಿದ್ಧಯ್ಯ, ನಟರಾಜು, ಯಶೋಧಮ್ಮ, ಗೀತ, ಸಾಹೇರಬಾನು ಸೇರಿದಂತೆ ಹಲವರು ಉಪಸ್ಥಿತರಿದ್ದರು.

    ವರದಿ: ಎ.ಎನ್. ಪೀರ್ , ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ

    September 28, 2026

    ಮರಗಳ ಮಾರಣಹೋಮದಿಂದ ಮಳೆ ಕೊರತೆ: ನ್ಯಾ.ಜಯಂತ್ ಕುಮಾರ್ ಕಳವಳ

    September 27, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ

    September 28, 2026

    ತುಮಕೂರು:  ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಸಂಕಷ್ಟಕ್ಕೆ ಸ್ಪಂದಿಸದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ, ಸಮರ್ಪಕ…

    ‘RSS, BJPಯವರನ್ನು ಬೆಂಗಳೂರಿನಿಂದ ಓಡಿಸಬೇಕು’: ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್

    September 28, 2026

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.