ಕಾಂಗ್ರೆಸ್ ನವರ ಬೂಟಾಟಿಕೆ ಮಾತು, ಸುಳ್ಳು ಹೇಳುವ ಚಾಳಿಯಿಂದ ಸುಳ್ಳಿನ ಸುಳಿಯಲ್ಲಿ ಸಿಲುಕಿದ್ದಾರೆ. ತಮ್ಮ ಕಾಲದ ಭ್ರಷ್ಟಾಚಾರಗಳನ್ನು. ಜಾತಿಗಳನ್ನು ಒಡೆಯುವ ಕೆಲಸವನ್ನು ಮಾಡಿದ್ದಾರೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ವಾಗ್ದಾಳಿ ನಡೆಸಿದರು.
ಹಾಸನ ಜಿಲ್ಲೆಯ ಬೇಲೂರಿನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರೊಂದಿಗೆ ಭಾಗವಹಿಸಿ ಮಾತನಾಡಿದ ಅವರು, ಭ್ರಷ್ಟ ಕಾಂಗ್ರೆಸ್ ನ್ನು ಶಾಶ್ವತವಾಗಿ ಜನರು ಮನೆಗೆ ಕಳಿಸಲಿದ್ದಾರೆ ಎಂದರು.
ಹಾಸನ ಬಹಳ ವರ್ಷಗಳಿಂದ ಒಂದೇ ಪಕ್ಷದ ಹಿಡಿತದಲ್ಲಿದ್ದು, ಯಾವುದೇ ಅಭಿವೃದ್ಧಿಯಾಗುತ್ತಿಲ್ಲ. 3 ವರ್ಷಗಳಿಂದ ಭಾಜಪ ಸರ್ಕಾರದ ಆಡಳಿತವನ್ನು ಜನರು ನೋಡಿದ್ದಾರೆ. ಹಲವು ವರ್ಷಗಳ ಸಮಸ್ಯೆಗಳನ್ನು ಕಗ್ಗಂಟಾಗಿಸಿ, ರಾಜ್ಯದ ಪ್ರಗತಿಯನ್ನು ಕುಂಠಿತಗೊಳಿಸಲಾಗಿತ್ತು. ಈ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಕಮಲ ಅರಳಿಸಬೇಕಿದೆ. ಭಾರತೀಯ ಜನತಾ ಪಕ್ಷ ರಾಜ್ಯದಲ್ಲಿ ಆಡಳಿತದ ಚುಕ್ಕಾಣಿ ಹಿಡಲಿರುವ ವಿಶ್ವಾಸ ನಮಗಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


