ಬ್ಯೂಟಿ ಪಾರ್ಲರ್‌ಗೆ ಹೋಗದಂತೆ ಪತಿ ತಡೆದಿದ್ದಕ್ಕೆ 34 ವರ್ಷದ ಆತನ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಧ್ಯಪ್ರದೇಶದ ಇಂದೋರ್‌ನಲ್ಲಿ ಗುರುವಾರ ಈ ಘಟನೆ ನಡೆದಿದೆ.
ನಗರದ ಸ್ಕೀಮ್ ನಂಬರ್ 51 ಎಂಬ ಪ್ರದೇಶದಲ್ಲಿ ಮಹಿಳೆ ಶವವಾಗಿ ಪತ್ತೆಯಾಗಿದ್ದಾಳೆ ಎಂದು ಸಬ್ ಇನ್ಸ್‌ಪೆಕ್ಟರ್ ಉಮಾ ಶಂಕರ್ ಯಾದವ್ ಪಿಟಿಐಗೆ ತಿಳಿಸಿದ್ದಾರೆ. ಮರಣೋತ್ತರ ಪರೀಕ್ಷೆ ನಡೆಸಲಾಗಿದ್ದು, ಘಟನೆಯ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಬ್ಯೂಟಿಪಾರ್ಲರ್‌ಗೆ ಹೋಗುತ್ತಿದ್ದ ಪತ್ನಿಯನ್ನು ತಡೆದಿದ್ದರಿಂದ ಕೋಪಗೊಂಡು ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪತಿ ಪೊಲೀಸರಿಗೆ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


