ಚಾಮರಾಜನಗರ: ಹೆಣ್ಣು ಮಕ್ಕಳನ್ನು ಮದುವೆ ಮಾಡಿಸಿ ಗಂಡನ ಮನೆಗೆ ಕಳುಹಿಸುವಾಗ ತನ್ನ ಮಗಳು ಸುಖವಾಗಿರಬೇಕೆಂದು ಕೆಲವು ಷರತ್ತುಗಳನ್ನು ಹಾಕುವುದು ಸರ್ವೇಸಾಮಾನ್ಯ. ಆದರೆ ಇಲ್ಲೊಬ್ಬ ಭಾವಿ ಮಾವ ಹಾಕಿದ ಷರತ್ತಿನಿಂದ ಬೇಸತ್ತು ಇಬ್ಬರು ಪ್ರೇಮಿಗಳು ಜೀವವನ್ನು ಕಳೆದುಕೊಂಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬೊಮ್ಮಲಾಪುರ ಗ್ರಾಮದ 21 ವರ್ಷದ ಸತೀಶ್ ಹಾಗೂ 20 ವರ್ಷದ ವರಲಕ್ಷ್ಮಿ ನಾಲ್ಕು ವರ್ಷಗಳಿಂದ ಪ್ರೀತಿಸುತ್ತಿದ್ದರು. ವರಲಕ್ಷ್ಮಿ ಖಾಸಗಿ ಆಸ್ಪತ್ರೆಯಲ್ಲಿ ನರ್ಸಿಂಗ್ ಕೋರ್ಸ್ ಮಾಡುತ್ತಿದ್ದಳು. ಸತೀಶ್ ಬಿ.ಕಾಂ. ಮುಗಿಸಿ ಪೊಲೀಸ್ ಕೆಲಸಕ್ಕೆ ಅರ್ಜಿ ಹಾಕಿದ್ದು, ಇವರಿಬ್ಬರು ಮದುವೆಯಾಗಲು ನಿರ್ಧರಿಸಿದ್ದರು.
ಇನ್ನೂ ತಾವು ಮದುವೆಗೆ ನಿರ್ಧರಿಸಿರುವ ವಿಚಾರವನ್ನು ತಿಳಿಸಿದಾಗ ವರಲಕ್ಷ್ಮಿಯ ತಂದೆ, ತನ್ನ ಮಗಳನ್ನು ಮದುವೆಯಾಗಬೇಕಾದರೆ, ಸರ್ಕಾರಿ ನೌಕರಿ ಪಡೆದುಕೊಂಡು ಬಾ ಎಂದು ಷರತ್ತು ವಿಧಿಸಿದ್ದಾರೆ. ಮದುವೆಯ ಕನಸು ಹೊತ್ತು ಬಂದಿದ್ದ ಜೋಡಿ ಇದರಿಂದಾಗಿ ತೀವ್ರವಾಗಿ ನೊಂದಿದ್ದಾರೆ ಎನ್ನಲಾಗಿದೆ. ಹೀಗಾಗಿ ಇಬ್ಬರು ಕೂಡ ಆತ್ಮಹತ್ಯೆಯ ನಿರ್ಧಾರಕ್ಕೆ ಬಂದಿದ್ದು, ಮೈಸೂರಿನ ಲಾಡ್ಜ್ ರೂಮ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ವರದಿಯಾಗಿದೆ.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700