7 ರಾಜ್ಯಗಳ 13 ಸ್ಥಾನಗಳಿಗೆ ಜುಲೈ 10ರಂದು ಉಪ ಚುನಾವಣೆ ನಿಗದಿಯಾಗಿದೆ. ಲೋಕಸಭಾ ಚುನಾವಣೆಯಲ್ಲಿ ಗೆದ್ದಿದ್ದರಿಂದ ಹಾಗೂ ಶಾಸಕರಾಗಿದ್ದವರ ಸಾವು ಸೇರಿದಂತೆ ನಾನಾ ಕಾರಣಗಳಿಗೆ ತೆರವಾಗಿರುವ 13 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.
ಕೇಂದ್ರ ಚುನಾವಣಾ ಆಯೋಗ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಿಸಿದ್ದು, ಜುಲೈ 13ರಂದು ಮತ ಎಣಿಕೆ ನಡೆಯಲಿದೆ. ಪಶ್ಚಿಮ ಬಂಗಾಳದ ರಾಯ್ ಗಂಜ್, ರಾಣಾಘಟ್, ದಕ್ಷಿಣ್, ಭಾಗ್ದಾಹ್, ಮಣಿಕಟ್ಲಾ, ಬಿಹಾರದ ರುಪೌಲಿ, ತಮಿಳುನಾಡಿನ ವಿಕ್ರವಾಂದಿ, ಮಧ್ಯಪ್ರದೇಶದ ಅಮ್ರಾವರ, ಉತ್ತರಾಖಂಡ್ ನ ಬದರೀನಾಥ್ ಮತ್ತು ಮಂಗಲೂರ್, ಪಂಜಾಬ್ ನ ಜಲಂಧರ್ ವೆಸ್ಟ್, ಹಿಮಾಚಲ ಪ್ರದೇಶದ ದೆಹ್ರಾ, ಹಮಿರ್ಪುರ್, ನಲಘಡ್, ಕರ್ನಾಟಕದ ಚನ್ನಪಟ್ಟಣದಲ್ಲಿ ಉಪ ಚುನಾವಣೆ ನಡೆಯಲಿದೆ.
ಶಿಗ್ಗಾವಿ, ಸಂಡೂರು, ಚನ್ನಪಟ್ಟಣ ವಿಧಾನಸಭೆ ಹಾಗೂ ದಕ್ಷಿಣ ಕನ್ನಡ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ತಿಗೆ ನಡೆಯುವ ಉಪ ಚುನಾವಣೆಗೆ ಬಿಜೆಪಿಯಿಂದ ಉಸ್ತುವಾರಿಗಳ ನೇಮಕ ಮಾಡಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA