ಲೋಕಸಭಾ ಚುನಾವಣೆ ಮುಗಿದಿದ್ದು, ಫಲಿತಾಂಶ ಕೂಡ ಹೊರಬಿದ್ದಿದೆ. ಆದರೆ ಅದನ್ನು ಅರಗಿಸಿಕೊಳ್ಳಬೇಕಿದೆ. ಏಕೆಂದರೆ ಮತದಾರ ಪ್ರಭುಗಳ ನೀಡಿದ ತೀರ್ಮಾನ ಇಡೀ ದೇಶದ ರಾಜಕೀಯದಲ್ಲೇ ಭಾರೀ ಸಂಚಲನ ಸೃಷ್ಟಿಸಿದೆ.
ನಮ್ಮ ಕರ್ನಾಟಕ ರಾಜ್ಯದ ಚಿತ್ರಣ ನೋಡುವದಾದರೆ ರಾಜ್ಯದಲ್ಲಿ ಬಿಜೆಪಿ 17, ಕಾಂಗ್ರೆಸ್ 9 ಹಾಗೂ ಜೆಡಿಎಸ್ 2 ಸ್ಥಾನಗಳನ್ನು ಪಡೆದು ಗೆಲುವಿನ ನಗೆ ಬೀರಿವೆ. ಆದರೀಗ ಈ ನಡುವೆ 4 ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆಯಬೇಕಿದೆ.
ರಾಜ್ಯದಲ್ಲಿ ಸಕ್ರಿಯ ರಾಜಕಾರಣದಲ್ಲಿ ತೊಡಗಿದ್ದು, ಇದೀಗ ರಾಷ್ಟ್ರ ರಾಜಕಾರಣದಲ್ಲಿ ಮಿಂಚಲು ರೆಡಿಯಾಗಿರುವ ಹೆಚ್.ಡಿ. ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ, ಇ.ತುಕರಾಂ ಮತ್ತು ಕೋಟಾ ಶ್ರೀನಿವಾಸ್ ಪೂಜಾರಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಭರ್ಜರಿ ಗೆಲುವು ದಾಖಲಿಸಿದ್ದಾರೆ. ಹೀಗಾಗಿ ಇವರ ಸ್ಥಾನಗಳು ಮುಂದೆ ತೆರವಾಗಲಿದ್ದು, ಈ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ.
ಹೀಗಾಗಿ ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರು ಪ್ರತಿನಿಧಿಷಿದ್ದ ಚೆನ್ನಪಟ್ಟಣ, ಬೊಮ್ಮಾಯಿ ಅವರ ಕ್ಷೇತ್ರ ಶಿಗ್ಗಾವಿ, ತುಕರಾಂ ಅವರ ಸಂಡೂರು ಕ್ಷೇತ್ರ ಹಾಗೂ ಸರಳ ರಾಜಕಾರಣಿಯಾದ ಕೋಟ ಶ್ರೀನಿವಾಸ ಪೂಜಾರಿ ಅವರ ವಿಧಾನಪರಿಷತ್ ಸ್ಥಾನಗಳಿಗೆ ಸದ್ಯದಲ್ಲೇ ಚುನಾವಣೆ ನಡೆಯಲಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


