ತುಮಕೂರು: ಸಿ.ಇ.ಟಿ. ಪರೀಕ್ಷಾ ಫಲಿತಾಂಶವನ್ನು ಶೀಘ್ರ ಪ್ರಕಟಿಸಲು ಎಐಡಿಎಸ್ ಓ ಜಿಲ್ಲಾ ಕಾರ್ಯದರ್ಶಿ ಲಕ್ಕಪ್ಪ ಸಿ.ಬಿ. ಒತ್ತಾಯಿಸಿದ್ದಾರೆ.
ಈ ಬಾರಿ ಸಿ.ಇ.ಟಿ. ಪರೀಕ್ಷೆಯಲ್ಲಿ ಉಂಟಾದ ಗೊಂದಲವು ಇಡೀ ಶೈಕ್ಷಣಿಕ ವರ್ಷ ಪ್ರಾರಂಭಗೊಳ್ಳುವಲ್ಲಿ ಸಮಸ್ಯೆ ಸೃಷ್ಟಿಸಿದೆ. ಕಾಮೆಡ್– ಕೆ ನ ಫಲಿತಾಂಶ ಬಂದಾಗಿಯೂ ಇಂದಿಗೂ ಸಿ.ಇ.ಟಿ. ಫಲಿತಾಂಶ ಪ್ರಕಟಿಸಲಾಗಿಲ್ಲ. ಒಂದೆಡೆ ಸಿ.ಇ.ಟಿ ಪ್ರಶ್ನೆ ಪತ್ರಿಕೆಯಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಸೇರಿಸಿರುವುದು ವಿದ್ಯಾರ್ಥಿಗಳಲ್ಲಿ ತೀರ್ವ ಆತಂಕ ಸೃಷ್ಟಿಸಿತ್ತು. ಈಗ ಸಿ.ಇ.ಟಿ. ಫಲಿತಾಂಶ ತಡವಾಗುತ್ತಿರುವುದರಿಂದ ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಮತ್ತಷ್ಟು ಆತಂಕ ಮಡುಗಟ್ಟಿದೆ ಎಂದು ಅವರು ಹೇಳಿದರು.
ಕಳೆದ ಎರಡು ವರ್ಷಗಳಿಂದ ಕೋವಿಡ್ ನಿಂದ ತಡವಾಗಿದ್ದ ಶೈಕ್ಷಣಿಕ ಕಾರ್ಯಚಟುವಟಿಕೆಗಳನ್ನು ಪ್ರತಿ ವರ್ಷವೂ ಸರಿದೂಗಿಸುವ ಯತ್ನ ನಡೆದಿತ್ತು. ಆದರೆ ಈ ಬಾರಿ ಕೆ.ಇ.ಎ. ಸೃಷ್ಟಿಸಿದ ಸಮಸ್ಯೆಯಿಂದ ಮತ್ತೇ ಶೈಕ್ಷಣಿಕ ವರ್ಷ ಪ್ರಾರಂಭವಾಗಲು ತಡವಾಗುತ್ತಿದೆ. ವಿದ್ಯಾರ್ಥಿಗಳ ಕಲಿಕೆಯ ಮೇಲೆ ಇದು ದುಷ್ಪರಿಣಾಮ ಬೀರಲಿದೆ ಎಂದು ಅವರು ಕಳವಳ ವ್ಯಕ್ತಪಡಿಸಿದ್ದಾರೆ.
ಈ ಕೂಡಲೇ ಸಿ.ಇ.ಟಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿ, ಪ್ರವೇಶಾತಿ ಪ್ರಕ್ರಿಯೆ ಪ್ರಾರಂಭಿಸಬೇಕೆಂದು ಎ.ಐ.ಡಿ.ಎಸ್.ಓ ಸರ್ಕಾರವನ್ನು ಒತ್ತಾಯಿಸುತ್ತದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296


