ಬೆಳಗಾವಿ: ಲ್ಯಾಪ್ ಟಾಪ್ ವಿತರಣೆ ಮಾಡುವಂತೆ ಒತ್ತಾಯಿಸಿ ಆರ್ ಸಿಯು ವಿದ್ಯಾರ್ಥಿಗಳು ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ತಾಲ್ಲೂಕಿನ ಹಿರೇಬಾಗೇವಾಡಿಯ ಮಲ್ಲಪ್ಪನಗುಡ್ಡದಲ್ಲಿ ಆರ್ ಸಿಯು ಕ್ಯಾಂಪಸ್ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸುವ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದ ಮುಖ್ಯಮಂತ್ರಿಗೆ ವಿದ್ಯಾರ್ಥಿಗಳು ಮುತ್ತಿಗೆ ಹಾಕಿದ್ದಾರೆ.
ಪರಿಶಿಷ್ಟ ಜಾತಿ, ಪಂಗಡದವರಾದ, ನಾಲ್ಕನೇ ಸೆಮಿಸ್ಟರ್ ನಲ್ಲಿರುವ ನಮಗೆ ಲ್ಯಾಪ್ ಟಾಪ್ ನೀಡಿಲ್ಲ. ನಾವು 316 ಮಂದಿ ಇದ್ದೇವೆ. ಕುಲಪತಿ, ಕುಲಸಚಿವರನ್ನು ಕೇಳಿದರೆ ಎಸ್ ಸಿಪಿ ಮತ್ತು ಟಿಎಸ್ಪಿ ಅನುದಾನ ಬಂದಿಲ್ಲ ಎನ್ನುತ್ತಿದ್ದಾರೆ. ಅವರಿಂದ ಸೂಕ್ತ ಸ್ಪಂದನೆ ಸಿಗುತ್ತಿಲ್ಲ ಎಂದು ಆರೋಪಿಸಿದರು. ಈ ವೇಳೆ ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದ ಸಿಎಂ ಶೀಘ್ರವೇ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.