ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರಿಗೆ, ಜೆಡಿಎಸ್ನ ಉಚ್ಚಾಟಿತ ಅಧ್ಯಕ್ಷ ಸಿ. ಎಂ. ಇಬ್ರಾಹಿಂ ಎಚ್ಚರಿಕೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಅವರು, ಲೋಕಸಭಾ ಚುನಾವಣೆಯ ಹೊಸ್ತಿಲಿನಲ್ಲಿ ಜೆಡಿಎಸ್ನ ನಾಯಕರು ಮಾಡಿರುವ ಬಿಜೆಪಿ ಜೊತೆಗಿನ ಮೈತ್ರಿ ಸರಿಯಲ್ಲ. ಇದನ್ನು ನಾನು ಮೊದಲಿನಿಂದಲೂ ವಿರೋಧಿಸುತ್ತಾ ಬಂದಿದ್ದೇನೆ. ಈಗಲೂ ನಾನು ದೇವೇಗೌಡರಿಗೆ ಎಚ್ಚರಿಕೆ ನೀಡುತ್ತಿದ್ದೇನೆ. ನಿರ್ಧಾರ ಹಿಂದೆ ಸರಿಯಿರಿ. ಇದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.
ಪುತ್ರನ ನಿರ್ಧಾರಗಳಿಂದ ದೇವೇಗೌಡ ಅವರು ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಮಾಜಿ ಸಚಿವ ಸಿ. ಎಂ. ಇಬ್ರಾಹಿಂ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಲ್ಲಾ ಶಾಸಕರು ಜಾತ್ಯತೀತ ಸಿದ್ಧಾಂತದಲ್ಲೇ ಗೆದ್ದು ಬಂದಿರುವುದು. ಈಗಾಗಲೇ ಜೆಡಿಎಸ್ನ ಐವರು ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ. ಇದು ದೇವೇಗೌಡ, ಕುಮಾರಸ್ವಾಮಿ ಆರೋಗ್ಯದ ಮೇಲೆ ಪರಿಣಾಮ ಬೀರಬಾರದು. ಹೀಗಾಗಿ ಸಮಾಧಾನದಿಂದ ಅವರಿಗೆ ಸಂದೇಶ ಮುಟ್ಟಿಸುತ್ತಿದ್ದೇನೆ ಎಂದರು.
ನಮ್ಮ ಮಾತನ್ನು ಕೇಳದಿದ್ದರೆ ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಮಾಜಿ ಸಚಿವ ಸಿ. ಎಂ. ಇಬ್ರಾಹಿಂ, ಪಕ್ಷದ ವರಿಷ್ಠ ಹೆಚ್. ಡಿ. ದೇವೇಗೌಡ ಅವರಿಗೆ ಎಚ್ಚರಿಕೆ ನೀಡಿದರು.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಡಿ. 11ರ ಬಳಿಕ ರಾಜ್ಯಾದ್ಯಂತ ಪ್ರವಾಸ ಮಾಡುತ್ತೇನೆ. ರಾಜ್ಯದಲ್ಲಿ ನಮಗೆ ಮೂರನೇ ಶಕ್ತಿಯಾಗಿ ಬೆಳೆಯಲು ಅವಕಾಶವಿದೆ. ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರಿಗೆ ಮತ್ತೊಮ್ಮೆ ಹೇಳುತ್ತೇನೆ. ನಮ್ಮ ಮಾತನ್ನು ಕೇಳದಿದ್ದರೆ ನಾವು ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದರು.


