ತುರುವೇಕೆರೆ: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕಲಾವಿದ ಮೂರ್ತಿ ಸಿ (43) ಅವರ ಮನೆಗೆ ತುರುವೇಕೆರೆ ತಾಲೂಕು ಆದಿ ಜಾಂಬವ ವಿವಿಧೋದ್ದೇಶ ಕ್ಷೇಮಾಭಿವೃದ್ಧಿ ಸಂಘದ ಸಂಸ್ಥಾಪಕರು ಮಾಜಿ ಜಿಲ್ಲಾ ಪರಿಷತ್ತಿನ ಸದಸ್ಯರಾಗಿದ್ದ ಹೊನ್ನಯ್ಯನವರ ಮೊಮ್ಮಗ ಸಿ.ಎಸ್.ಮೂರ್ತಿರವರು ಭೇಟಿ ನೀಡಿ ಸಾಂತ್ವನವನ್ನು ಹೇಳಿ ಆರ್ಥಿಕ ನೆರವನ್ನು ನೀಡಿದ್ದಾರೆ.
ಮೃತ ವ್ಯಕ್ತಿ ಮೂರ್ತಿ ಸಿ ಅವರು ಇಬ್ಬರು ಗಂಡು ಮಕ್ಕಳು ಹಾಗೂ ಪತ್ನಿಯನ್ನು ಅಗಲಿದ್ದಾರೆ. ಇವರ ಮಕ್ಕಳ ಮುಂದಿನ ವಿದ್ಯಾಭ್ಯಾಸಕ್ಕಾಗಿ ತನ್ನ ಕೈಲಾದ ಸಹಾಯವನ್ನು ಮಾಡುವುದಾಗಿ ಸಿ.ಎಸ್.ಮೂರ್ತಿ ಅವರು ಇದೇ ವೇಳೆ ಭರವಸೆ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದರು.
ಇನ್ನೂ ದಲಿತ ಜನಾಂಗದಲ್ಲಿ ಉನ್ನತ ವಿದ್ಯಾಭ್ಯಾಸಕ್ಕೆ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರಿಗೆ ಕೋಚಿಂಗ್ ಸೆಂಟರ್ ಗಳಲ್ಲಿ ತರಬೇತಿ ಪಡೆಯಲು ಸಹಾಯ ಮಾಡುವುದಾಗಿ ಇದೇ ವೇಳೆ ಸಿ.ಎಸ್.ಮೂರ್ತಿ ಘೋಷಿಸಿದರು.
ಈ ಸಂದರ್ಭದಲ್ಲಿ ಆದಿಜಾಂಭವ ವಿವಿದೋದ್ದೇಶ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಾಯಸಂದ್ರ ಎಂ.ಎನ್.ಸುಬ್ರಮಣ್ಯ, ದಲಿತ ಮುಖಂಡರಾದ ಟಿ.ಹೆಚ್.ಗುರುದತ್, ಮಾಜಿ ತಾಲೂಕು ಪಂಚಾಯ್ತಿ ಅಧ್ಯಕ್ಷರಾದ ಲಕ್ಷ್ಮೀದೇವಮ್ಮ, ಬಾಣಸಂದ್ರ ಕೃಷ್ಣ ಮಾದಿಗ, ಮುನಿಯೂರು ಗಿರೀಶ್, ಶಂಕರ್, ಮೃತರ ಪತ್ನಿ ಹಾಗೂ ಮಕ್ಕಳು ಇದ್ದರು.
ವರದಿ : ಸುರೇಶ್ ಬಾಬು ಎಂ. ತುರುವೇಕೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1