ಬೆಂಗಳೂರು: KSRTC ಮತ್ತು BMTC ಸೇರಿದಂತೆ ನಾಲ್ಕೂ ನಿಗಮಗಳ ಬಸ್ ಟಿಕೆಟ್ ದರವನ್ನು ಶೇ.15ರಷ್ಟು ಹೆಚ್ಚಳ ಮಾಡಲು ಗುರುವಾರ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣ ದರವನ್ನು ಶೇಕಡಾ 15 ರಷ್ಟು ಹೆಚ್ಚಿಸಲು ಅನುಮೋದನೆ ನೀಡಲಾಗಿದೆ.
ಸಚಿವ ಸಂಪುಟ ಸಭೆ ಬಳಿಕ ಮಾತನಾಡಿದ ಸಚಿವ ಎಚ್.ಕೆ.ಪಾಟೀಲ್ ಅವರು, ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸಚಿವ ಸಂಪುಟ ನಿರ್ಧರಿಸಿದ್ದು, ಜನವರಿ 5ರಿಂದ ಪರಿಷ್ಕೃತ ಟಿಕೆಟ್ ದರ ಅನ್ವಯವಾಗಲಿದೆ ಎಂದರು.
ನಾಲ್ಕು ಸಾರಿಗೆ ನಿಗಮಗಳ ಟಿಕೆಟ್ ದರ ಪರಿಷ್ಕರಿಸಿದ್ದೇವೆ. ಟಿಕೆಟ್ ದರ ಶೇ.15ರಷ್ಟು ಹೆಚ್ಚಿಸಲು ಅನುಮೋದಿಸಲಾಗಿದೆ. ದರ ಹೆಚ್ಚಳದಿಂದ ನಿತ್ಯ 7.84 ಕೋಟಿ ರೂ. ಆದಾಯ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಸಚಿವರು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx