nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ
    ರಾಷ್ಟ್ರೀಯ ಸುದ್ದಿ July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    By adminJuly 3, 2025No Comments3 Mins Read
    job

    *  ಎಲ್ಲಾ ಕ್ಷೇತ್ರಗಳಲ್ಲಿ ಉದ್ಯೋಗ ಸೃಷ್ಟಿ, ಉದ್ಯೋಗಾರ್ಹತೆ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸಲಿರುವ ಯೋಜನೆ

    *  ಉತ್ಪಾದನಾ ವಲಯ ಮತ್ತು ಮೊದಲ ಬಾರಿಗೆ ಉದ್ಯೋಗಕ್ಕೆ ಸೇರುವವರಿಗೆ ಪ್ರೋತ್ಸಾಹಧನ ನೀಡುವತ್ತ ಗಮನ ಹರಿಸಲಿದೆ

    *  ಮೊದಲ ಬಾರಿಗೆ ಉದ್ಯೋಗಕ್ಕೆ ಸೇರುವವರು ಎರಡು ಕಂತುಗಳಲ್ಲಿ ಗರಿಷ್ಠ 15,000 ರೂ.ಗಳವರೆಗೆ ಒಂದು ತಿಂಗಳ ವೇತನವನ್ನು ಪಡೆಯಲಿದ್ದಾರೆ

    *  ಒಂದು ಲಕ್ಷ ಕೋಟಿ ರೂ. ನಿಧಿಯನ್ನು ಹೊಂದಿರುವ ಈ ಯೋಜನೆಯು ಎರಡು ವರ್ಷಗಳಲ್ಲಿ 3.5 ಕೋಟಿಗಿಂತ ಅಧಿಕ ಉದ್ಯೋಗಗಳ ಸೃಷ್ಟಿಗೆ ಬೆಂಬಲ ನೀಡಲಿದೆ


    ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ಉತ್ಪಾದನಾ ವಲಯದ ಮೇಲೆ ವಿಶೇಷ ಗಮನ ಹರಿಸಿ, ಉದ್ಯೋಗ ಆಧರಿತ ಪ್ರೋತ್ಸಾಹಧನ'(ಇಎಲ್‌ಐ) ಯೋಜನೆಗೆ ಅನುಮೋದನೆ ನೀಡಿದೆ.

    ಉದ್ಯೋಗ ಸೃಷ್ಟಿ: ಎಲ್ಲ ವಲಯಗಳಲ್ಲಿ ಉದ್ಯೋಗಾವಕಾಶ ಮತ್ತು ಸಾಮಾಜಿಕ ಭದ್ರತೆಯನ್ನು ಹೆಚ್ಚಿಸುವುದು ಈ ಯೋಜನೆಯ ಉದ್ದೇಶವಾಗಿದೆ. ಈ ಯೋಜನೆಯಡಿ, ಮೊದಲ ಬಾರಿಯ ಉದ್ಯೋಗಿಗಳಿಗೆ ಒಂದು ತಿಂಗಳ ವೇತನ (15,000 ರೂ.ವರೆಗೆ), ಉದ್ಯೋಗದಾತರಿಗೆ ಹೆಚ್ಚುವರಿ ಉದ್ಯೋಗ ಸೃಷ್ಟಿಗಾಗಿ ಎರಡು ವರ್ಷಗಳವರೆಗೆ ಪ್ರೋತ್ಸಾಹಧನ ನೀಡಲಾಗುವುದು. ಉತ್ಪಾದನಾ ವಲಯಕ್ಕೆ ಇನ್ನೂ ಎರಡು ವರ್ಷಗಳವರೆಗೆ ವಿಸ್ತ್ರತ ಪ್ರಯೋಜನಗಳನ್ನು ನೀಡಲಾಗುವುದು. 4.1 ಕೋಟಿ ಯುವಕರಿಗೆ ಉದ್ಯೋಗ, ಕೌಶಲ್ಯ ಮತ್ತು ಇತರ ಅವಕಾಶಗಳನ್ನು ಒದಗಿಸಲು ಪ್ರಧಾನ ಮಂತ್ರಿಯವರ ಐದು ಯೋಜನೆಗಳ ಪ್ಯಾಕೇಜ್‌ ನ ಭಾಗವಾಗಿ 2024–25ರ ಕೇಂದ್ರ ಬಜೆಟ್‌ ನಲ್ಲಿ 2 ಲಕ್ಷ ಕೋಟಿ ರೂ.ಗಳ ಅನುದಾನದೊಂದಿಗೆ “ಉದ್ಯೋಗ ಆಧರಿತ ಪ್ರೋತ್ಸಾಹಧನ'(ಇಎಲ್‌ ಐ) ಯೋಜನೆಯನ್ನು ಘೋಷಿಸಲಾಯಿತು. 99,446 ಕೋಟಿ ರೂ.ಗಳ ಅನುದಾನದೊಂದಿಗೆ, ‘ಇಎಲ್‌ ಐ’ ಯೋಜನೆಯು 2 ವರ್ಷಗಳ ಅವಧಿಯಲ್ಲಿ ದೇಶದಲ್ಲಿ 3.5 ಕೋಟಿಗೂ ಹೆಚ್ಚು ಉದ್ಯೋಗಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ಈ ಪೈಕಿ 1.92 ಕೋಟಿ ಫಲಾನುಭವಿಗಳು ಮೊದಲ ಬಾರಿಗೆ ಉದ್ಯೋಗ ಪಡೆಯಲಿದ್ದಾರೆ. ಆಗಸ್ಟ್ 01, 2025 ಮತ್ತು ಜುಲೈ 31, 2027ರ ನಡುವೆ ಸೃಷ್ಟಿಯಾದ ಉದ್ಯೋಗಗಳಿಗೆ ಈ ಯೋಜನೆಯ ಪ್ರಯೋಜನಗಳು ಅನ್ವಯವಾಗುತ್ತವೆ.

    ಈ ಯೋಜನೆಯು ಎರಡು ಭಾಗಗಳನ್ನು ಒಳಗೊಂಡಿದ್ದು, ‘ಭಾಗ–ಎ’ ಮೊದಲ ಬಾರಿಗೆ ಕೆಲಸ ಮಾಡುವವರ ಮೇಲೆ ಗಮನ ಕೇಂದ್ರೀಕರಿಸಿದರೆ ‘ಭಾಗ-ಬಿ’ ಉದ್ಯೋಗದಾತರ ಮೇಲೆ ಗಮನ ಕೇಂದ್ರೀಕರಿಸಿದೆ:

    ಭಾಗ ಎ: ಮೊದಲ ಬಾರಿಯ ಉದ್ಯೋಗಿಗಳಿಗೆ ಪ್ರೋತ್ಸಾಹ:

    ಈ ಭಾಗವು ಇಪಿಎಫ್‌ ಒ’ನಲ್ಲಿ ನೋಂದಾಯಿತರಾದ ಮೊದಲ ಬಾರಿಯ ಉದ್ಯೋಗಿಗಳನ್ನು ಗುರಿಯಾಗಿಸಿಕೊಂಡಿದೆ. ಇದರ ಅಡಿಯಲ್ಲಿ ಗರಿಷ್ಠ 15,000 ರೂ.ಗಳವರೆಗೆ ಒಂದು ತಿಂಗಳ ಇಪಿಎಫ್ ವೇತನವನ್ನು ಎರಡು ಕಂತುಗಳಲ್ಲಿ ನೀಡಲಾಗುತ್ತದೆ. 1 ಲಕ್ಷ ರೂ. ವರೆಗಿನ ವೇತನ ಹೊಂದಿರುವ ಉದ್ಯೋಗಿಗಳು ಇದಕ್ಕೆ ಅರ್ಹರಾಗಿರುತ್ತಾರೆ. ಮೊದಲ ಕಂತನ್ನು 6 ತಿಂಗಳ ಸೇವೆಯ ನಂತರ ಮತ್ತು 2ನೇ ಕಂತನ್ನು 12 ತಿಂಗಳ ಸೇವೆಯ ನಂತರ ಹಾಗೂ ಉದ್ಯೋಗಿಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪೂರ್ಣಗೊಳಿಸಿದ ನಂತರ ಪಾವತಿಸಲಾಗುತ್ತದೆ. ಉಳಿತಾಯ ಮಾಡುವ ಅಭ್ಯಾಸವನ್ನು ಉತ್ತೇಜಿಸಲು, ಪ್ರೋತ್ಸಾಹಧನದ ಒಂದು ಭಾಗವನ್ನು ಠೇವಣಿ ಖಾತೆಯ ಉಳಿತಾಯ ಸಾಧನದಲ್ಲಿ ನಿಗದಿತ ಅವಧಿಗೆ ಇಡಲಾಗುತ್ತದೆ. ಇದನ್ನು ನಂತರದ ದಿನಗಳಲ್ಲಿ ಉದ್ಯೋಗಿಯು ಹಿಂಪಡೆಯಬಹುದು.

    ‘ಭಾಗ-ಎ’ ಸುಮಾರು 1.92 ಕೋಟಿ ಮೊದಲ ಬಾರಿಯ ಉದ್ಯೋಗಿಗಳಿಗೆ ಪುಯೋಜನವನ್ನು ನೀಡುತ್ತದೆ.

    ಭಾಗ ಬಿ: ಉದ್ಯೋಗದಾತರಿಗೆ ಬೆಂಬಲ:

    ಈ ಭಾಗವು ಎಲ್ಲಾ ಕ್ಷೇತ್ರಗಳಲ್ಲಿ ಹೆಚ್ಚುವರಿ ಉದ್ಯೋಗ ಸೃಷ್ಟಿಯತ್ತ ಗಮನ ಹರಿಸುತ್ತದೆಯಾದರೂ, ಉತ್ಪಾದನಾ ವಲಯದ ಮೇಲೆ ವಿಶೇಷವಾಗಿ ಗಮನ ಕೇಂದ್ರೀಕರಿಸುತ್ತದೆ. ಗರಿಷ್ಠ 1 ಲಕ್ಷ ರೂ.ವರೆಗಿನ ವೇತನ ಹೊಂದಿರುವ ಉದ್ಯೋಗಿಗಳಿಗೆ ಸಂಬಂಧಿಸಿದಂತೆ ಉದ್ಯೋಗದಾತರು ಈ ಪ್ರೋತ್ಸಾಹಧನವನ್ನು ಪಡೆಯುತ್ತಾರೆ. ಕನಿಷ್ಠ ಆರು ತಿಂಗಳವರೆಗೆ ನಿರಂತರ ಉದ್ಯೋಗ ಹೊಂದಿರುವ ಪ್ರತಿ ಹೆಚ್ಚುವರಿ ಉದ್ಯೋಗಿಗೆ ಸರ್ಕಾರವು ಎರಡು ವರ್ಷಗಳವರೆಗೆ ತಿಂಗಳಿಗೆ 3,000 ರೂ.ಗಳವರೆಗೆ ಪ್ರೋತ್ಸಾಹಧನ ನೀಡುವ ಮೂಲಕ ಉದ್ಯೋಗದಾತರನ್ನು ಪ್ರೋತ್ಸಾಹಿಸುತ್ತದೆ. ಉತ್ಪಾದನಾ ವಲಯಕ್ಕೆ, ಪ್ರೋತ್ಸಾಹಕಗಳನ್ನು 3 ಮತ್ತು 4 ನೇ ವರ್ಷಗಳಿಗೂ ವಿಸ್ತರಿಸಲಾಗುವುದು. “ಇಪಿಎಫ್‌ಒ’ನಲ್ಲಿ ನೋಂದಾಯಿಸಲ್ಪಟ್ಟ ಸಂಸ್ಥೆಗಳು ಕನಿಷ್ಠ ಆರು ತಿಂಗಳವರೆಗೆ ಕನಿಷ್ಠ ಇಬ್ಬರು ಹೆಚ್ಚುವರಿ ಉದ್ಯೋಗಿಗಳನ್ನು (50 ಕ್ಕಿಂತ ಕಡಿಮೆ ಉದ್ಯೋಗಿಗಳನ್ನು ಹೊಂದಿರುವ ಉದ್ಯೋಗದಾತರಿಗೆ) ಅಥವಾ ಐದು ಹೆಚ್ಚುವರಿ ಉದ್ಯೋಗಿಗಳನ್ನು (50 ಅಥವಾ ಅದಕ್ಕಿಂತ ಹೆಚ್ಚಿನ ಉದ್ಯೋಗಿಗಳನ್ನು ಹೊಂದಿರುವ ಉದ್ಯೋಗದಾತರಿಗೆ) ಕನಿಷ್ಠ ಆರು ತಿಂಗಳವರೆಗೆ ಕಾಯಂ ಆಧಾರದ ಮೇಲೆ ನೇಮಿಸಿಕೊಳ್ಳಬೇಕಾಗುತ್ತದೆ.

    ಪ್ರೋತ್ಸಾಹಧನ ರಚನೆಯು ಈ ಕೆಳಗಿನಂತಿರುತ್ತದೆ:

    10,000.ರೂ. ವರೆಗಿನ ಇಸಿಎಫ್ ವೇತನ ಹೊಂದಿರುವ ಉದ್ಯೋಗಗಳಿಗೆ ಅನುಗುಣವಾಗಿ ಪ್ರೋತ್ಸಾಹಧನ ಸಿಗಲಿದೆ.

    ಈ ಭಾಗವು ಸುಮಾರು 2.60 ಕೋಟಿ ಜನರಿಗೆ ಹೆಚ್ಚುವರಿ ಉದ್ಯೋಗ ಸೃಷ್ಟಿಸಲು ಉದ್ಯೋಗದಾತರನ್ನು ಪ್ರೋತ್ಸಾಹಿಸುವ ನಿರೀಕ್ಷೆಯಿದೆ.

    ಪ್ರೋತ್ಸಾಹಕ ಪಾವತಿ ಕಾರ್ಯವಿಧಾನ:

    ಯೋಜನೆಯ ‘ಭಾಗ–ಎ’ ಅಡಿಯಲ್ಲಿ ಮೊದಲ ಬಾರಿಯ ಉದ್ಯೋಗಿಗಳಿಗೆ ಎಲ್ಲಾ ಪಾವತಿಗಳನ್ನು “ಆಧಾರ್ ಬ್ರಿಡ್ಜ್ ಪೇಮೆಂಟ್ ಸಿಸ್ಟಮ್'(ಎಬಿಪಿಎಸ್) ಬಳಸಿ ‘ಡಿಬಿಟಿ’ (ನೇರ ಲಾಭ ವರ್ಗಾವಣೆ) ಮೂಲಕ ಮಾಡಲಾಗುತ್ತದೆ. `ಭಾಗ-ಬಿ’ ಅಡಿಯಲ್ಲಿ ಉದ್ಯೋಗದಾತರಿಗೆ ಪಾವತಿಗಳನ್ನು ನೇರವಾಗಿ ಅವರ ಫ್ಯಾನ್-ಲಿಂಕ್ ಮಾಡಿದ ಖಾತೆಗಳಿಗೆ ಮಾಡಲಾಗುತ್ತದೆ.

    (ಇಎಲ್‌ಐ’ ಯೋಜನೆಯೊಂದಿಗೆ, ಎಲ್ಲಾ ಕ್ಷೇತ್ರಗಳಲ್ಲಿ, ವಿಶೇಷವಾಗಿ ಉತ್ಪಾದನಾ ವಲಯದಲ್ಲಿ ಉದ್ಯೋಗ ಸೃಷ್ಟಿಯನ್ನು ಹೆಚ್ಚಿಸಲು ಸರ್ಕಾರ ಉದ್ದೇಶಿಸಿದೆ. ಜೊತೆಗೆ ಮೊದಲ ಬಾರಿಗೆ ಕಾರ್ಯಪಡೆಗೆ ಸೇರುವ ಯುವಕರನ್ನು ಪ್ರೋತ್ಸಾಹಿಸುತ್ತದೆ. ಕೋಟ್ಯಂತರ ಯುವಕರು ಮತ್ತು ಮಹಿಳೆಯರಿಗೆ ಸಾಮಾಜಿಕ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸುವ ಮೂಲಕ ದೇಶದ ಕಾರ್ಯಪಡೆಯನ್ನು ಔಪಚಾರಿಕಗೊಳಿಸುವುದು ಈ ಯೋಜನೆಯ ಮತ್ತೊಂದು ಮಹತ್ವದ ಪ್ರಯೋಜನವಾಗಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    Comments are closed.

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Food

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ…

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.