ಬೆಂಗಳೂರು: ಗೋಬಿ ಮಂಚೂರಿ ಮತ್ತು ಕಬಾಬ್, ಕಾಟನ್ ಕ್ಯಾಂಡಿಯಲ್ಲಿ ಕೃತಕ ಬಣ್ಣ ಬಳಕೆ ನಿಷೇಧದ ಬಳಿಕ ಇದೀಗ ಕೇಕ್ ಗಳಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಕೇಕ್ ನಲ್ಲೂ ಕೃತಕ ಬಣ್ಣಗಳನ್ನು ಬಳಸಲಾಗುತ್ತಿದ್ದು, ಹೀಗಾಗಿ ಕೃತಕ ಬಣ್ಣಗಳನ್ನು ನಿಷೇಧಿಸಲು ಆರೋಗ್ಯ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗಿದೆ.
ಕೇಕ್ ನಲ್ಲಿ ಬಳಸುವ ಬಣ್ಣದಲ್ಲಿ ಅಪಾಯಕಾರಿ ಅಂಶಗಳು ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಶೀಘ್ರವೇ ಸರ್ಕಾರ ಕೇಕ್ ಗಳಲ್ಲಿ ಬಣ್ಣ ಬಳಕೆ ನಿಷೇಧಿಸಿ ಆದೇಶ ಹೊರಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q