ತುಮಕೂರು: ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯು ಡ್ರೋನ್ ಆಧಾರಿತ ಫೋಟೋಗ್ರಾಫಿ ಮತ್ತು ವಿಡಿಯೋಗ್ರಾಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಪರಿಶಿಷ್ಟ ಪಂಗಡದ ಯುವಕ/ಯುವತಿಯರಿಗೆ ಡ್ರೋನ್ ತರಬೇತಿ ನೀಡಲು ಆಸಕ್ತ ಪ.ಪಂಗಡದ ಯುವಕ/ಯುವತಿಯರಿಂದ ಅರ್ಜಿ ಆಹ್ವಾನಿಸಿದೆ.
ಅರ್ಜಿದಾರರು ಭರ್ತಿ ಮಾಡಿದ ಅರ್ಜಿಯನ್ನು ಡಿಸೆಂಬರ್ 10ರೊಳಗಾಗಿ ಆಯಾ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ/ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ/ ಪಾವಗಡ ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರು ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ತರಬೇತಿ ಪಡೆಯಲು ಪುರುಷರಿಗೆ 35 ವರ್ಷ ಹಾಗೂ ಮಹಿಳೆಯರಿಗೆ 40 ವರ್ಷ ವಯೋಮಿತಿ ನಿಗಧಿಪಡಿಸಲಾಗಿದೆ. ಅಭ್ಯರ್ಥಿಯ ಕುಟುಂಬದ ಆದಾಯ 2.50ಲಕ್ಷ ರೂ.ಗಳನ್ನು ಮೀರಬಾರದು.
ಮೂಲಿವಾಸಿ ಮತ್ತು ಅಲೆಮಾರಿ/ಅರೆ ಅಲೆಮಾರಿ ಮತ್ತು ಸೂಕ್ಷ್ಮ/ ಅತಿ ಸೂಕ್ಷ್ಮ ಪರಿಶಿಷ್ಟ ಪಂಗಡದ ಸಮುದಾಯದ ಯುವಕ/ಯುವತಿಯರಿಗೆ ಪ್ರಥಮ ಆದ್ಯತೆ ನೀಡಲಾಗುವುದು. ಅಭ್ಯರ್ಥಿಯು ತರಬೇತಿ ನೋಂದಣಿ ಸಮಯದಲ್ಲಿ ಎಸ್.ಎಸ್.ಎಲ್.ಸಿ. ಅಂಕಪಟ್ಟಿ ಹಾಗೂ ಆಧಾರ್ ಕಾರ್ಡನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ತರಬೇತಿ ಅವಧಿಯಲ್ಲಿ ಶಿಷ್ಯವೇತನ ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ದೂ.ವಾ.ಸಂ.0816-2279153ನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ತ್ಯಾಗರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx