ತುಮಕೂರು: ಕೈಮಗ್ಗ ಮತ್ತು ಜವಳಿ ಇಲಾಖೆ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವೈಯಕ್ತಿಕ ಫಲಾನುಭವಿ/ ಪಾಲುದಾರಿಕೆ ಸಂಸ್ಥೆ/ ಕಂಪನಿ/ ಜವಳಿ ಸಹಕಾರಿ ಸಂಘ/ ಸಂಸ್ಥೆಗಳು ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದ ಸಣ್ಣ ಮತ್ತು ಅತಿಸಣ್ಣ ಘಟಕಗಳನ್ನು ಸ್ಥಾಪಿಸಲು ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಜವಳಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಸಣ್ಣ ಮತ್ತು ಅತಿಸಣ್ಣ ಘಟಕಗಳನ್ನು ಸ್ಥಾಪಿಸಲು ಈಗಾಗಲೇ ಜಿಲ್ಲಾ ಮಟ್ಟದ ಏಕಗವಾಕ್ಷಿ ಒಪ್ಪಿಗೆ ಸಮಿತಿ ಸಭೆಯಲ್ಲಿ ಅನುಮೋದನೆ ಪಡೆದ ಹಾಗೂ ಬ್ಯಾಂಕ್/ ಹಣಕಾಸು ಸಂಸ್ಥೆಗಳಿಂದ ಸಾಲ ಮಂಜೂರಾತಿ ಪಡೆದಿರುವ ಅರ್ಹ ಘಟಕಗಳು ಪೂರ್ಣ ಪ್ರಮಾಣದ ದಾಖಲಾತಿಗಳೊಂದಿಗೆ ಪ್ರಸ್ತಾವನೆಯನ್ನು ಜನವರಿ 31ರೊಳಗಾಗಿ ಸಲ್ಲಿಸಬೇಕು.
ಯೋಜನೆ ಕುರಿತು ಪೂರ್ಣ ಮಾಹಿತಿಯನ್ನು ಉಪನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ನಾಗನಿಲಯ, ಕಸಬಾ ಮುಖ್ಯರಸ್ತೆ, ಸಿದ್ದಗಂಗಾ ಬಡಾವಣೆ, ತುಮಕೂರು ಅಥವಾ ದೂ.ವಾ.ಸಂ. 0816–2275370ಯನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


