ತುಮಕೂರು: ಪ್ರವಾಸೋದ್ಯಮ ಇಲಾಖೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಹಾಗೂ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಿದೆ.
ಬೆಂಗಳೂರಿನ Food Craft Institute (FCI) ಹಾಗೂ Institute of Hotel Management (IHM) ಸಂಸ್ಥೆಗಳಿಂದ ವಸತಿ ಸಹಿತ ತರಬೇತಿ ನೀಡಲಾಗುವುದು. ಎಸ್.ಎಸ್.ಎಲ್.ಸಿ. ಪಾಸಾದ ಅಭ್ಯರ್ಥಿಗಳಿಗೆ 4 ತಿಂಗಳ Food & Beverage Service Steward ತರಬೇತಿ, 5ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ 4 ತಿಂಗಳ Room Attendant ತರಬೇತಿ, 12ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ 4 ತಿಂಗಳ Front Office Associate ತರಬೇತಿ ಹಾಗೂ 8ನೇ ತರಗತಿ ಪಾಸಾದ ಅಭ್ಯರ್ಥಿಗಳಿಗೆ 5 ತಿಂಗಳ ಅಡುಗೆ ತಯಾರಿಕೆ ತರಬೇತಿ ನೀಡಲಾಗುವುದು.
ಅರ್ಜಿ ಸಲ್ಲಿಸುವವರು 20 ರಿಂದ 45 ವರ್ಷ ವಯೋಮಾನದವರಾಗಿರಬೇಕು. ಆಸಕ್ತ ಅಭ್ಯರ್ಥಿಗಳು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಡಿಸೆಂಬರ್ 24ರೊಳಗಾಗಿ ನಿಗಧಿತ ಅರ್ಜಿ ನಮೂನೆ ಪಡೆಯಬಹುದಾಗಿದೆ. ಭರ್ತಿ ಮಾಡಿದ ಅರ್ಜಿಯೊಂದಿಗೆ ಆಧಾರ ಕಾರ್ಡ್, ಜಾತಿ ಪ್ರಮಾಣ ಪತ್ರ, ಶೈಕ್ಷಣಿಕ ವಿದ್ಯಾರ್ಹತೆ ಅಂಕಪಟ್ಟಿಯನ್ನು ಸ್ವಯಂ ದೃಢೀಕರಿಸಿ ದ್ವಿಪತ್ರಿಯಲ್ಲಿ ಡಿಸೆಂಬರ್ 27ರ ಸಂಜೆ 5 ಗಂಟೆಯೊಳಗಾಗಿ ಮುಚ್ಚಿದ ಲಕೋಟೆಯಲ್ಲಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0816–2006349 ಅಥವಾ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ರೆಡ್ಕ್ರಾಸ್ ಭವನ, 1ನೇ ಮಹಡಿ, ಕೊಠಡಿ ಸಂಖ್ಯೆ: ಎಫ್ 232, ಅಶೋಕ ರಸ್ತೆ, ತುಮಕೂರು ಇವರನ್ನು ಸಂಪರ್ಕಿಸಬೇಕೆಂದು ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx