ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರನ್ನು ‘ಬಚ್ಚಾ’ ಎಂದು ರಮೇಶ್ ಜಾರಕಿಹೊಳಿ ಕರೆದಿರುವುದು ತಪ್ಪು ಎಂದು ಅವರನ್ನು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಖಂಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್ ಜಾರಕಿಹೊಳಿ ಅವರು ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ಬಚ್ಚಾ ಎಂಬ ಪದ ಬಳಕೆ ಮಾಡಿರುವುದು ತಪ್ಪು, ಅವರ ಪದ ಬಳಕೆಯನ್ನು ಒಪ್ಪಲಾಗದು ಎಂದರು.
ವಿಜಯೇಂದ್ರ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು, ಆ ನಿರ್ಧಾರವನ್ನು ಎಲ್ಲರೂ ಗೌರವಿಸಬೇಕು. ಇದನ್ನು ಯಾರೂ ಮರೆಯಬಾರದು. ಶಾಸಕರೊಬ್ಬರು ಈ ರೀತಿ ಮಾತನಾಡಿರುವುದು ತಪ್ಪು. ಇದನ್ನು ಒಪ್ಪಲಾಗದು ಎಂದಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx