ಕೆನಡಾದ ಸಂಸತ್ತು ಹೌಸ್ ಆಫ್ ಕಾಮನ್ ನಲ್ಲಿ ಒಂದು ನಿಮಿಷ ಮೌನ ಆಚರಿಸುವ ಮೂಲಕ ಹತ್ಯೆಯಾದ ಭಾರತದ ಮೋಸ್ಟ್ ವಾಂಟೆಡ್ ಉಗ್ರ, ಖಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜಾರ್ ಗೆ ಗೌರವ ಸಲ್ಲಿಸಿ ಸುದ್ದಿಯಾಗಿದೆ.
ಖಲಿಸ್ತಾನಿ ಭಯೋತ್ಪಾದಕನಿಗೆ ಕೆನಡಾ ಸಂಸತ್ತು ಗೌರವ ಸಲ್ಲಿಸಿದ್ದಕ್ಕೆ ಭಾರತ ಖಂಡಿಸಿದೆ. ಈ ಬಗ್ಗೆ ವ್ಯಾಂಕೋವರ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಪ್ರತಿಕ್ರಿಯೆ ನೀಡಿದೆ. ಏರ್ ಇಂಡಿಯಾ ವಿಮಾನ ‘ಕನಿಷ್ಕಾ182’ ಮೇಲೆ ನಡೆದ ಬಾಂಬ್ ದಾಳಿಯನ್ನು ಜಗತ್ತಿಗೆ ನೆನಪಿಸಿದೆ.
ಕೆನಡಾ ಹರ್ದೀಪ್ ಸಿಂಗ್‌ಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರತಿಯಾಗಿ ವ್ಯಾಂಕೋವರ್ ನಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ 1985ರಲ್ಲಿ ಏರ್ ಇಂಡಿಯಾ ಕಾನಿಷ್ಕಾ ವಿಮಾನದ ಮೇಲೆ ಖಲಿಸ್ತಾನಿ ಬಾಂಬ್ ದಾಳಿಯಲ್ಲಿ ಸಾವನ್ನಪ್ಪಿದ 329 ಜನರನ್ನು ಸ್ಮರಿಸಲು ತೀರ್ಮಾನಿಸಿದೆ, ಇದರಲ್ಲಿ ಉಗ್ರ ಹರ್ದೀಪ್ ಸಿಂಗ್ ಮುಖ್ಯ ರೂವಾರಿಯಾಗಿದ್ದ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA