ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ. ಸೋಮಣ್ಣ ಚುನಾವಣೆ ಪ್ರಚಾರದ ವೇಳೆ ಜೆಡಿಎಸ್ ಬಣಗಳ ನಡುವೆ ಮಾರಾಮಾರಿ ನಡೆದಿದೆ. ತುಮಕೂರಿನ ತಿಪಟೂರಿನ ನೊಣವಿನಕೆರೆಯಲ್ಲಿ ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿ ವಿ. ಸೋಮಣ್ಣ ಪ್ರಚಾರದ ವೇಳೆ ಜೆಡಿಎಸ್ ಬಣಗಳ ನಡುವೆ ಮಾರಾಮಾರಿ ನಡೆಯಿತು.
ನೊಣವಿನಕೆರೆಯಲ್ಲಿ ಸೋಮಣ್ಣ ಪ್ರಚಾರ ನಡೆಸುತ್ತಿದ್ದಾಗ ಜೆಡಿಎಸ್ ಮುಖಂಡ ರಾಕೇಶ್ ಗೌಡ ಸೇರಿದಂತೆ, ಅನೇಕ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಗುಂಪು ಜೆಡಿಎಸ್ ಮುಖಂಡ ಕೆ.ಟಿ ಶಾಂತಕುಮಾರ್ ನೇತೃತ್ವದಲ್ಲಿ ಪ್ರಚಾರ ಸಭೆ ನಡೆಸಬಾರದು ಎಂದು ಪಟ್ಟು ಹಿಡಿದರು.
ರಾಕೇಶ್ ಗೌಡ ಗುಂಪು ಹಾಗೂ ಕೆ.ಟಿ. ಶಾಂತಕುಮಾರ್ ಗುಂಪುಗಳ ನಡುವೆ ಭಾರೀ ವಾಗ್ವಾದ ಜಗಳ ನಡೆದು ಕೈ ಕೈ ಮಿಲಾಯಿಸುವ ಹಂತ ತಲುಪಿದಾಗ ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹಾಗೂ ಅಭ್ಯರ್ಥಿ ವಿ. ಸೋಮಣ್ಣ ಪರಿಸ್ಥಿತಿ ತಿಳಿಗೊಳಿಸಿದರು.
ಇನ್ನೂ ಕೆಲ ಕಾಲ ಸ್ಥಳದಲ್ಲಿ ಬಿಗುವಿನ ವಾತಾವರಣ ಉಂಟಾಗಿ ಗೊಂದಲಕ್ಕೆ ಕಾರಣವಾಯಿತು. ಜೆಡಿಎಸ್ ಗುಂಪುಗಳ ನಡುವೆ ಬಣ ರಾಜಕೀಯ ಬೂದಿ ಮುಚ್ಚಿದ ಕೆಂಡದಂತ್ತಾಗಿದ್ದುಎರಡು ಬಣಗಳ ರಾಜಕೀಯ ಮೇಲಾಟಕ್ಕೆ ಮೈತ್ರಿ ಅಭ್ಯರ್ಥಿ ವಿ. ಸೋಮಣ್ಣ ನವರಿಗೆ ಮಗ್ಗಲ ಮುಳ್ಳುವಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296