nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026
    Facebook Twitter Instagram
    ಟ್ರೆಂಡಿಂಗ್
    • ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್
    • ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!
    • ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ
    • ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ
    • ಅತಿಥಿ ಶಿಕ್ಷಕರ ನೇಮಕ: ಅರ್ಜಿ ಆಹ್ವಾನ
    • ಧಾರ್ಮಿಕ ಪರಂಪರೆಗೆ ಆಧುನಿಕ ಸ್ಪರ್ಶ: ತುಮಕೂರು ದಸರಾ ಉತ್ಸವದಲ್ಲಿ ಹೊಸ ಆಕರ್ಷಣೆಗಳು ಇವು 
    • ಸೊಳ್ಳೆಗಳ ಕಾಟಕ್ಕೆ ಮನೆಮದ್ದು ಪರಿಹಾರ!
    • WhatsApp ಬಳಕೆದಾರರೇ ಎಚ್ಚರ! ಈ 2 ಸೆಟ್ಟಿಂಗ್‌ ಆನ್ ಮಾಡಿ, ಸೈಬರ್ ವಂಚನೆಯ ಅಪಾಯ ತಗ್ಗಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ: ದಸರಾ ಮಹೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ
    ರಾಜ್ಯ ಸುದ್ದಿ October 3, 2024

    ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ: ದಸರಾ ಮಹೋತ್ಸವದಲ್ಲಿ ಸಿಎಂ ಸಿದ್ದರಾಮಯ್ಯ

    By adminOctober 3, 2024No Comments3 Mins Read
    mysore dasara

    ಮೈಸೂರು: ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ ಶಕ್ತಿಯನ್ನು ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

    ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಚುನಾವಣಾ ಸಂದರ್ಭದಲ್ಲಿ ತಾಯಿ ಚಾಮುಂಡೇಶ್ವರಿ ಸನ್ನಿಧಾನದಲ್ಲಿ ನಾನು ಮತ್ತು ಡಿ.ಕೆ.ಶಿವಕುಮಾರ್‌ ಅವರು ಚುನಾವಣೆಯಲ್ಲಿ ಜಯ ಗಳಿಸಿದರೆ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಭರವಸೆ ನೀಡಿದ್ದೆವು. ಅದರಂತೆ ಚುನಾವಣೆಯಲ್ಲಿ ಜಯ ಗಳಿಸಿದ ಎಂಟೇ ತಿಂಗಳಲ್ಲಿ ಎಲ್ಲಾ 5 ಯೋಜನೆಗಳನ್ನು ಜಾರಿಗೊಳಿಸಿದ್ದೇವೆ ಎಂದರು.

    ಗ್ಯಾರಂಟಿ ಯೋಜನೆಗಳ ಮೂಲಕ ಸಂವಿಧಾನದ ಆಶಯದಂತೆ ದುರ್ಬಲ ವರ್ಗದವರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬುವ ಕಾರ್ಯವನ್ನು ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿಗಳಿಂದ ಪ್ರತಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ 40 ರಿಂದ 50 ಸಾವಿರ ರೂಪಾಯಿ ಆರ್ಥಿಕ ನೆರವು ದೊರೆಯುತ್ತಿದೆ ಎಂದರು.

    ಗೃಹಲಕ್ಷ್ಮಿ ಯೋಜನೆಯಡಿ 1.21 ಕೋಟಿ ಕುಟುಂಬಗಳ ಯಜಮಾನಿಯರು ಪ್ರತಿ ತಿಂಗಳು ರೂ.2 ಸಾವಿರ ಪಡೆಯುತ್ತಿದ್ದಾರೆ. ಗೃಹಜ್ಯೋತಿ ಯೋಜನೆಯಡಿ 1.40 ಕುಟುಂಬಗಳು ಉಚಿತ ವಿದ್ಯುತ್‌ ಸೌಲಭ್ಯ ಪಡೆಯುತ್ತಿವೆ. ಯುವ ನಿಧಿ ಯೋಜನೆಯಡಿ 1.82 ಲಕ್ಷ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾದಾರರು ಆರ್ಥಿಕ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು.

    ಈ ವರ್ಷ ಉತ್ತಮ ಮಳೆಯಾಗಿದ್ದು, ಇಡೀ ರಾಜ್ಯದ ರೈತರು ಸಂತೋಷದಿಂದ ಇದ್ದಾರೆ. ಮುಂಗಾರು ಬಿತ್ತನೆ ರಾಜ್ಯದಲ್ಲಿ 99 ಶೇ ಆಗಿದೆ. ಇನ್ನೂ ಹೆಚ್ಚು ಮಳೆಯಾಗಲಿ, ಹೆಚ್ಚು ಬೆಳೆಯಾಗಲಿ ನಮ್ಮ ನಿರೀಕ್ಷೆಗಿಂತ ಮೀರಿ ಬೆಳೆ ಬೆಳೆಯಲಿ ಎಂದು ಚಾಮುಂಡೇಶ್ವರಿ ತಾಯಿಯನ್ನು ಪ್ರಾರ್ಥಿಸುತ್ತೇನೆ. ಮಳೆ — ಬೆಳೆ ಆದರೆ ಮಾತ್ರ ಜನರು ಸುಖ ಶಾಂತಿಯಿಂದ ಬದುಕಲು ಸಾಧ್ಯ ಎಂದು ಅವರು ಅಭಿಪ್ರಾಯಪಟ್ಟರು.

    ಈ ಬಾರಿ ಉತ್ತಮ ಮಳೆಯಾಗಿರುವ ಹಿನ್ನೆಲೆಯಲ್ಲಿ ದಸರಾ ಮಹೋತ್ಸವ ಅದ್ದೂರಿಯಾಗಿ ಮಾಡಲು ಸೂಚನೆ ನೀಡಿದ್ದೇನೆ. ದಸರಾ ನಾಡಹಬ್ಬವಾಗಬೇಕು, ಅಧಿಕಾರಿಗಳ ಹಬ್ಬವಾಗಬಾರದು. ಎಲ್ಲಾ ಕಾರ್ಯಕ್ರಮಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

    ಈ ಬಾರಿ ದಸರಾ ಮಹೋತ್ಸವಕ್ಕೆ ಹಂ.ಪ. ನಾಗರಾಜಯ್ಯ ಅವರು ವಿದ್ಯುಕ್ತವಾಗಿ ಚಾಲನೆ ನೀಡಿದ್ದಾರೆ. ಅವರಿಗೆ ಈ ಮೊದಲೇ ಈ ಅವಕಾಶ ದೊರೆಯಬೇಕಿತ್ತು. ಹಂ.ಪ. ನಾಗರಾಜಯ್ಯ ಅವರು ಕನ್ನಡ ಸಾಹಿತ್ಯ ಹಾಗೂ ಜೈನ ಸಾಹಿತ್ಯಕ್ಕೆ ಹೆಚ್ಚಿನ ಕೊಡುಗೆ ನೀಡಿದ್ದಾರೆ. ಕನ್ನಡ ಸಾರಸ್ವತ ಲೋಕಕ್ಕೆ ಅವರ ಅಪಾರ ಕೊಡುಗೆಯನ್ನು ಕನ್ನಡ ನಾಡಿನ ಜನ ಮರೆಯಲು ಸಾಧ್ಯವಿಲ್ಲ. ಅವರ ಆಯ್ಕೆ ಔಚಿತ್ಯಪೂರ್ಣ. ಕರ್ನಾಟಕ ಕಂಡ ಅಪರೂಪದ ಸಾಹಿತಿ ಅವರು.

    ಹಂ.ಪ. ನಾಗರಾಜಯ್ಯ ಅವರು ಮೌಲ್ಯಯುತ ಭಾಷಣ ಮಾಡಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾಯಿತ ಸರಕಾರಗಳನ್ನು ವಾಮಮಾರ್ಗಗಳಲ್ಲಿ ಕಿತ್ತು ಹಾಕುವುದು ಪ್ರಜಾಪ್ರಭುತ್ವ ವಿರೋಧಿ ಎಂದು ಹೇಳಿದ್ದಾರೆ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮಗಳಾಗಿದ್ದು, ಪ್ರಜಾಪ್ರಭುತ್ವ ಇನ್ನಷ್ಟು ಬಲಪಡಿಸಬೇಕು ಎಂದಿರುವುದು ಔಚಿತ್ಯಪೂರ್ಣವಾಗಿದೆ.

    ಜನರ ಆಶೀರ್ವಾದದಿಂದ ನಾವು ಆಡಳಿತಕ್ಕೆ ಬಂದಿದ್ದೇವೆ. 5 ವರ್ಷಗಳ ಕಾಲ ರಾಜ್ಯದ ಜನತೆ ನಮಗೆ ಅವಕಾಶ ಕೊಟ್ಟಿದ್ದಾರೆ. ಈಗಲೂ ಎಷ್ಟೇ ತೊಡಕುಗಳು ಎದುರಾದರೂ, ತಾಯಿ ಚಾಮುಂಡೇಶ್ವರಿ ಆಶೀರ್ವಾದ ನಮ್ಮ ಮೇಲಿದೆ. ಐದು ವರ್ಷಗಳ ಕಾಲ ನಾವು ಆಡಳಿತ ಮಾಡಿಯೇ ಮಾಡುತ್ತೇವೆ ಎಂದು ಹೇಳಿದರು.

    ‌ಸತ್ಯಕ್ಕೆ ಯಾವತ್ತೂ ಜಯ ದೊರೆಯುತ್ತದೆ. ನಿಮ್ಮೆಲ್ಲರ ಆಶೀರ್ವಾದ, ಈ ರಾಜ್ಯದ ಜನರ ಆಶೀರ್ವಾದ ಈ ಸರ್ಕಾರದ ಮೇಲೆ ಇರುವ ತನಕ ಯಾರಿಗೂ ಏನೂ ಮಾಡಲು ಸಾಧ್ಯವಿಲ್ಲ. ನಾನು ಈ ಕ್ಷೇತ್ರದಲ್ಲಿ ಐದು ಬಾರಿ ಗೆದ್ದಿದ್ದೇನೆ. ಮೂರು ಬಾರಿ ಸೋತಿದ್ದೇನೆ. ಚಾಮುಂಡೇಶ್ವರಿ ತಾಯಿ ಹಾಗೂ ಇಲ್ಲಿನ ಜನರ ಆಶೀರ್ವಾದದಿಂದಲೇ ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದೇನೆ. ಇಲ್ಲಿಯವರೆಗೆ ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದ್ರೆ ಇಷ್ಟು ದೀರ್ಘಕಾಲ ರಾಜಕಾರಣದಲ್ಲಿ ಇರಲು ಸಾಧ್ಯವಿರಲಿಲ್ಲ ಎಂದು ಅವರು ಹೇಳಿದರು.

    ನನಗೆ ನ್ಯಾಯಾಲಯಗಳಲ್ಲಿ ನಂಬಿಕೆಯಿದೆ. ಆತ್ಮಸಾಕ್ಷಿಗೆ ಅನುಗುಣವಾಗಿ ನಡೆಯುವ ಪ್ರಯತ್ನ ಮಾಡುತ್ತಿದ್ದೇವೆ. ಗಾಂಧೀಜಿ ಅವರು ಹೇಳಿದಂತೆ ಆತ್ಮಸಾಕ್ಷಿಯ ನ್ಯಾಯಾಲಯ ಎಲ್ಲಾ ನ್ಯಾಯಾಲಯಗಳಿಗಿಂತ ಮಿಗಿಲಾದುದು. ಆತ್ಮಸಾಕ್ಷಿಗೆ ತಕ್ಕಂತೆ ನಡೆದಿದ್ದೇನೆ ಎಂಬ ದೃಢ ನಂಬಿಕೆ ಇದೆ. ಪರಸ್ಪರರನ್ನು ಪ್ರೀತಿಸಬೇಕೆ ಹೊರತು ಯಾರನ್ನೂ ದ್ವೇಷಿಸಬಾರದು. ಎಲ್ಲಾ ಧರ್ಮಗಳು ಪರಸ್ಪರ ಪ್ರೀತಿಸಿ ಮಾನವರಾಗಿ ಬಾಳುವ ಸಂದೇಶವನ್ನು ನೀಡಿವೆ ಎಂದು ತಿಳಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

    admin
    • Website

    Related Posts

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    “ದಮ್ಮು, ತಾಕತ್ತು ಇದ್ದರೆ ಹೋರಾಟಕ್ಕೆ ಬನ್ನಿ”; ನಟ ಸುದೀಪ್‌ ಗೆ ಉಗ್ರಪ್ಪ ಸವಾಲು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕುಣಿಗಲ್

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಕುಣಿಗಲ್: ತಾಲೂಕಿನ ವಿವಿಧೆಡೆ ಆಹಾರ ಸುರಕ್ಷತಾಧಿಕಾರಿ, ಆರೋಗ್ಯಾಧಿಕಾರಿ ಮತ್ತು ಅವರ ತಂಡ ಹೋಟೆಲ್, ರೆಸ್ಟೋರೆಂಟ್, ಹಾಟ್ ಚಿಪ್ಸ್, ಸ್ವೀಟ್ ಅಂಗಡಿ…

    ಡೆಂಗೀ ಹಾಗೂ ಚಿಕೂನ್ ಗುನ್ಯ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ವಹಿಸಿ: ಈ ಮಾಹಿತಿ ತಪ್ಪದೇ ಓದಿ!

    October 15, 2026

    ರುಡ್ ಸೆಟ್ ಸಂಸ್ಥೆ : ಫಾಸ್ಟ್ ಫುಡ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

    October 15, 2026

    ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಕಾರು: ಚಾಲಕನ ಸಮಯಪ್ರಜ್ಞೆಯಿಂದ ಬದುಕುಳಿದ ಕುಟುಂಬ

    October 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.