ಬೆಂಗಳೂರು: ನೆಲಮಂಗಲ ತಾಲೂಕಿನ ಬಾಣವಾಡಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಕೊನೆಯುಸಿರೆಳೆದಿರುವ ಘಟನೆ ನಡೆದಿದೆ. ಶಶಿಕುಮಾರ್(27) ಮೃತ ದುರ್ದೈವಿಯಾಗಿದ್ದಾನೆ.
ಶಶಿಕುಮಾರ್ ಬಾಣವಾಡಿ ಗ್ರಾಮ ಪಂಚಾಯತಿ ಕಾರ್ಯಾಲಯದ ಸಹಾಯಕನಾಗಿ ಕೆಲಸ ಮಾಡುತ್ತಿದ್ದ. ಇನ್ನು ಘಟನೆಗೆ ಸಂಬಂಧಿಸಿದಂತೆ ಕ್ಯಾಂಟರ್ ಅನ್ನು ಜಪ್ತಿ ಮಾಡಿ, ಪೊಲೀಸರು ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಈ ಕುರಿತು ಕುದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


