ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರ ಹೊರವಲಯದ ಕೋಲಾರಮ್ಮ ಕೆರೆ ಬಳಿ ಈ ಘಟನೆ ನಡೆದಿದೆ.
ಶಬ್ಬಿ ಉಲ್ಲಾ ಬೇಗ್( 41) ಇರ್ಷಾದ್ ಉಲ್ಲಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇಬ್ಬರು ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಬೇತಮಂಗಲ ನಿವಾಸಿಗಳಾಗಿದ್ದಾರೆ.
ಬೈಕ್ ಗೆ ಕ್ಯಾಂಟರ್ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ. ಕೋಲಾರ ನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy