ಹಿರಿಯೂರು: ಕಾರು ಡಿವೈಡರ್ ಗೆ ಡಿಕ್ಕಿಯಾದ ಪರಿಣಾಮ ಇಬ್ಬರು ದಾರುಣವಾಗಿ ಸಾವನ್ನಪ್ಪಿ, ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ಬೆಂಗಳೂರು –ಹಿರಿಯೂರಿನ ರಾಷ್ಟ್ರೀಯ ಹೆದ್ದಾರಿ 4ರ ಕೆ ಆರ್ ಹಳ್ಳಿ ಗೇಟ್ ಬಳಿಯಲ್ಲಿ ನಡೆದಿದೆ.
ಬೆಂಗಳೂರಿನ ನಂಜುಡೇಶ್ವರ ನಗರದ ನಂದಿನಿ ಬಡಾವಣೆ ನಿವಾಸಿಗಳು ಅಪಘಾತಕ್ಕೀಡಾದವರಾಗಿದ್ದು, ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಆದಿವಾಲ ಗ್ರಾಮದ ಸಮೀಪ ರವಿಡಾಬಾ ಹೋಟೆಲ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಇಬ್ಬರು ಮೃತಪಟ್ಟು, ಮೂವರಿಗೆ ಗಂಭೀರ ಗಾಯವಾಗಿದೆ.
ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆ ಯ ಪಿ ಎಸ್ ಐ ಶಶಿಕಲಾ ಡಬ್ಲೂ, ಪರಿಶೀಲನೆ ನಡೆಸಿದ್ದು, ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಮುರುಳಿಧರನ್ ಆರ್. ಹಿರಿಯೂರು ( ಚಿತ್ರದುರ್ಗ ).
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB