ಲಕ್ನೋ: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಮದುವೆ ದಿಬ್ಬಣದ ಕಾರು ಭೀಕರ ಅಪಘಾತಕ್ಕೀಡಾಗಿ ವರ ಸಹಿತ 8 ಮಂದಿ ಸಾವನ್ನಪ್ಪಿರುವ ಘಟನೆ ಬೆಳಗ್ಗೆ 6:30 ರ ಸುಮಾರಿಗೆ ಜೇವಾನೈ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ
ಬೊಲೆರೊ ಎಸ್ ಯುವಿ ಕಾರು ಕಾಲೇಜಿನ ಗೋಡೆಗೆ ಡಿಕ್ಕಿ ಹೊಡೆದ ಪರಿಣಾಮ 24 ವರ್ಷದ ವರ ಸೇರಿದಂತೆ ಒಂದೇ ಕುಟುಂಬದ ಎಂಟು ಸದಸ್ಯರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವರ ಸೂರಜ್ (24), ವರನ ಅತ್ತಿಗೆ ಆಶಾ (26), ಆಶಾ ಅವರ ಮಗಳು ಐಶ್ವರ್ಯ (2), ಮನೋಜ್ ಅವರ ಮಗ ವಿಷ್ಣು (6), ಮತ್ತು ವರನ ಚಿಕ್ಕಮ್ಮ ಸೇರಿ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ.
ಜನತಾ ಇಂಟರ್ ಕಾಲೇಜು ಬಳಿ ಚಾಲಕನ ನಿಯಂತ್ರಣ ತಪ್ಪಿದಾಗ ಬೊಲೆರೊ ಕಾರು ಅತಿ ವೇಗದಲ್ಲಿ ಚಲಿಸುತ್ತಿತ್ತು ಎಂದು ವರದಿಯಾಗಿದೆ. ವಾಹನವು ಗೋಡೆಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ.
ವಾಹನದಲ್ಲಿ ಹತ್ತು ಜನರು ಇದ್ದರು. ಅವರೆಲ್ಲರೂ ಒಂದೇ ಕುಟುಂಬದ ಸದಸ್ಯರು. ಮದುವೆ ಸಮಾರಂಭಕ್ಕೆ ಹೋಗುತ್ತಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC