ತುಮಕೂರು: ಕಾರು ಅಪಘಾತಕ್ಕೊಳಗಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಚೇತರಿಸಿಕೊಂಡಿದ್ದು, ತಮ್ಮ ಆರೋಗ್ಯದ ಬಗ್ಗೆ ವಿಡಿಯೋ ಸಂದೇಶದ ಮೂಲಕ ಮಾಹಿತಿ ನೀಡಿದ್ದಾರೆ.
ಕಾರಿನ ಟೈರ್ ನಲ್ಲಿ ಕಾಣಿಸಿಕೊಂಡ ಸಮಸ್ಯೆಯಿಂದಾಗಿ ಕಾರು ಮಗುಚಿ ಬಿದ್ದಿದ್ದು, ಪರಿಣಾಮವಾಗಿ ನನಗೆ ಗಾಯಗಳಾಗಿವೆ. ಸದ್ಯ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನಾನು ಕ್ಷೇಮವಾಗಿದ್ದೇನೆ. ಸಂಪೂರ್ಣವಾಗಿ ಗುಣಮುಖವಾಗಲು 1 ತಿಂಗಳುಗಳ ಕಾಲ ಬೇಕಾಗಬಹುದು ಎಂದು ತಿಳಿಸಿದರು.
ತಿಮ್ಮಮಾನಹಳ್ಳಿ ಬೋರಯ್ಯ ಜಯಚಂದ್ರರವರು. ಸಿರಾ ತಾಲ್ಲೂಕಿನ ಗೌಡಗೆರೆ ಹೋಬಳಿಯ ಜೆ.ಹೊಸಹಳ್ಳಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಜುಂಜಪ್ಪ ಸ್ವಾಮಿ, ಚಿತ್ರಲಿಂಗೇಶ್ವರ, ಗೊಡ್ಢಗಾಳಮ್ಮದೇವಿ, ಕರಿಯಮ್ಮ ದೇವಿ ಮತ್ತು ಭೂತಪ್ಪ ಸ್ವಾಮಿ ಜಾತ್ರಾ ಮಹೋತ್ಸವದ ಕಾರ್ಯಕ್ರಮಗಳನ್ನು ಮುಗಿಸಿಕೊಂಡು ಬರುವ ವೇಳೆ ಕಲ್ಲಂಬೆಳ್ಳ ಬಳಿ ಅವರ ಕಾರು ಅಪಘಾತಕ್ಕೀಡಾಗಿತ್ತು.
ವರದಿ: ಮುರುಳಿಧರನ್ ಆರ್ ಹಿರಿಯೂರು ( ಚಿತ್ರದುರ್ಗ – ದಾವಣಗೆರೆ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5