ಕೊರಟಗೆರೆ : ತಾಲ್ಲೂಕಿನ ಬೈಪಾಸ್ ರಸ್ತೆಯಲ್ಲಿ ಬೆಂಗಳೂರು ಮಾರ್ಗವಾಗಿ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಕೊರಟಗೆರೆ ಮಾರ್ಗವಾಗಿ ಹೋಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದ ಘಟನೆ ನಡೆದಿದೆ.
ಅಪಘಾತದ ತೀವ್ರತೆಗೆ ದ್ವಿಚಕ್ರ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದ್ದು, ದ್ವಿಚಕ್ರ ವಾಹನ ಸವಾರನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸ್ ಠಾಣಾ ಸಿಬ್ಬಂದಿ ರಾಜಶೇಖರ್ ಭೇಟಿ ನೀಡಿ ಗಾಯಾಳುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸ್ಥಳವನ್ನು ಪರಿಶೀಲಿಸಿ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಅಪಘಾತದಲ್ಲಿ ಗಾಯಗೊಂಡಿರುವ ಯುವಕ ಕೊರಟಗೆರೆ ತಾಲ್ಲೂಕಿನ ಕಂಬದಹಳ್ಳಿಯ ಶೇಖರಪ್ಪ ಎನ್ನುವವರ ಪುತ್ರ 23ವರ್ಷ ವಯಸ್ಸಿನ ಚೇತನ್ ಎಂದು ತಿಳಿದುಬಂದಿದೆ. ಈ ಅಪಘಾತಕ್ಕೆ ಅತಿವೇಗದ ಚಾಲನೆಯೇ ಕಾರಣ ಎಂದು ಸ್ಥಳೀಯರು ತಿಳಿಸಿದ್ದಾರೆ.
ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB