ತುಮಕೂರು: ಚಲಿಸುತ್ತಿದ್ದ ವೇಳೆ ಏಕಾಏಕಿ ಕಾರಿನಲ್ಲಿ ದಟ್ಟ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟು ಕರಕಲಾಗಿರೋ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ದೇವರಹಳ್ಳಿ ಬಳಿ ರಾಷ್ಟ್ರೀಯ ಹೆದ್ದಾರಿ ಪಕ್ಕದ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.
ಶಿರಾ ತಾಲ್ಲೂಕಿನ ಮದ್ದನಾಯಕನಹಳ್ಳಿ ಗ್ರಾಮಕ್ಕೆ ಸೇರಿದವರು ಕಾರು ಎನ್ನಲಾಗಿದೆ. ಕಾರು ಶಿರಾ ಕಡೆಯಿಂದ ತಾವರೆ ಕೆರೆ ಕಡೆ ಹೋಗುತ್ತಿದ್ದ ವೇಳೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣ ರಸ್ತೆ ಬದಿಯಲ್ಲಿ ಕಾರು ನಿಲ್ಲಿಸಿದ್ದಾರೆ. ನೋಡು ನೋಡುತ್ತಿದ್ದಂತೆ ಕಾರು ಧಗಧಗನೆ ಹೊತ್ತಿ ಉರಿಯಿತು. ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿ ಶಾಮಕದಳದ ಸಿಬ್ಬಂದಿ ದೌಡಾಯಿಸಿ, ಅಗ್ನಿ ನಂದಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4