ವಿಜಯಪುರ: ಕಾರು ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ನಡೆದಿದೆ.
ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದ ಈ ದುರ್ಘಟನೆಯಲ್ಲಿ ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಎಂಬವರು ಮೃತಪಟ್ಟಿದ್ದಾರೆ. ಅಲ್ಲದೇ ಇನ್ನಿಬ್ಬರು ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕೆಲಸದ ನಿಮಿತ್ತ ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿದ್ದು, ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.
ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತನಿಖೆ ಮುಂದುವರಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4