ಬಳ್ಳಾರಿ: ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯರು ಹಾಗೂ ಒಬ್ಬ ವಕೀಲ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆ ವಿಡಪನಕಲ್ ನಲ್ಲಿ ಇಂದು ಮುಂಜಾನೆ ನಡೆದಿದೆ.
ಬಳ್ಳಾರಿಯ ನಿವಾಸಿ ಡಾ.ಗೋವಿಂದರಾಜುಲು, ಡಾ.ಯೋಗೇಶ್ ಮತ್ತು ವಕೀಲ ವೆಂಕಟನಾಯ್ಡು (55) ಮೃತಪಟ್ಟವರಾಗಿದ್ದಾರೆ. ಕಾರಿನಲ್ಲಿದ್ದ ಮತ್ತೊಬ್ಬ ವೈದ್ಯ ಅಮರೇಗೌಡ ಪಾಟೀಲ್ ಸ್ಥಿತಿ ಗಂಭೀರವಾಗಿದೆ.
ವಿದೇಶಿ ಪ್ರವಾಸಕ್ಕೆ ತೆರಳಿದ್ದ ಇವರು ಕಳೆದ ರಾತ್ರಿ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ನಂತರ ಅನಂತಪುರ ಮಾರ್ಗವಾಗಿ ಕಾರಿನಲ್ಲಿ ಬಳ್ಳಾರಿಗೆ ವಾಪಸಾಗುತ್ತಿದ್ದ ವೇಳೆ ಮುಂಜಾನೆ 5.30ರ ಸಂದರ್ಭದಲ್ಲಿ ಅಪಘಾತ ನಡೆದಿದೆ.
ಬೆಳಗಿನ ಜಾವ ನಿದ್ದೆ ಮಂಪರಿನಲ್ಲಿ ರಸ್ತೆ ಪಕ್ಕದ ಮರಕ್ಕೆ ಕಾರು ಡಿಕ್ಕಿಯಾಗಿದೆ ಅಪಘಾತದ ರಭಸಕ್ಕೆ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx