ತುಮಕೂರು: ತಾಲ್ಲೂಕಿನ ನೆಲಹಾಳ್ ಬಳಿ ಸೋಮವಾರ ಬೆಳಗಿನ ಜಾವ ಕಾರು ಹಳ್ಳಕ್ಕೆ ಉರುಳಿ ಬಿದ್ದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ.
ಕೃಷ್ಣ (33) ಮೃತರು. ಗದಗ ಜಿಲ್ಲೆ ಶಿರಹಟ್ಟಿ ತಾಲ್ಲೂಕಿನ ಕೃಷ್ಣ, ಬೆಂಗಳೂರಿನ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ದೀಪಾವಳಿ ಹಬ್ಬದ ಪ್ರಯುಕ್ತ ಸ್ವಗ್ರಾಮಕ್ಕೆ ತೆರಳುತ್ತಿದ್ದಾಗ ಈ ಅವಘಡ ನಡೆದಿದೆ.
ಬೆಳಗಿನ ಜಾವ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಹಳ್ಳಕ್ಕೆ ಉರುಳಿದೆ. ಕೋರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC