ಬೀದರ್: ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರೊಂದು ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಬಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ನಲ್ಲಿ ನಡೆದಿದೆ.
ಗಾಯಗೊಂಡಿರುವ ಬಾಲಕನನ್ನು ವಿಕಾಸ್ ಎಂದು ಗುರುತಿಸಲಾಗಿದೆ. ಔರಾದ್ ತಾಲೂಕಿನ ಜಿರಗಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಸದ್ಯ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಳಿಗ್ಗೆ ಶಾಲೆಗೆ ಹೋಗುತ್ತಿದ್ದ ವಿಕಾಸ್, ಹೆದ್ದಾರಿ ದಾಟಿ ಪಕ್ಕದ ರಸ್ತೆಗೆ ಹೋಗುತ್ತಿದ್ದ. ಈ ವೇಳೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ.
ಅಪಘಾತ ಖಂಡಿಸಿ ಸ್ಥಳೀಯರು ಹಾಗೂ ಬಾಲಕನ ಕುಟುಂಬದವರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ದಾರೆ. ಅಪಘಾತದ ನಿಯಂತ್ರಣಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296