ಶಿರಸಿ: ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬಂಡಲ ಗ್ರಾಮದಲ್ಲಿ ಶುಕ್ರವಾರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸೇರಿದಂತೆ ಐವರು ಮೃತಪಟ್ಟಿದ್ದಾರೆ.
ಇಂದು ಬೆಳಗ್ಗೆ ಹುಬ್ಬಳ್ಳಿಯಿಂದ ಭಟ್ಕಳಕ್ಕೆ ತೆರಳುತ್ತಿದ್ದ ಕೆಎಸ್ ಆರ್ ಟಿಸಿ ಬಸ್, ಕುಮುಟಾದಿಂದ ಶಿರಸಿಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟರೆ, ಮತ್ತೊಬ್ಬರು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


