ತುಮಕೂರು: ಕಾರು ಹಾಗೂ ಲಾರಿ ನಡುವೆ ನಡೆದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ನವ ದಂಪತಿ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಳ್ಳಿ ತಾಲೂಕಿನ, ಹುಳಿಯಾರು ಗೇಟ್ ಬಳಿ ನಡೆದಿದೆ.
ರಘು(35), ಅನುಷಾ (28) ಸ್ಥಳದಲ್ಲೇ ಸಾವನ್ನಪ್ಪಿದ ದಂಪತಿಯಾಗಿದ್ದಾರೆ. ಮಧ್ಯಾಹ್ನ 12 ಗಂಟೆ ಸುಮಾರಿಗೆ ಈ ಭೀಕರ ಅಪಘಾತ ನಡೆದಿದೆ.
ದಂಪತಿಯು ಚಿಕ್ಕನಾಯಕನಹಳ್ಳಿ ತಾಲೂಕಿನ ತಿಗಳನಹಳ್ಳಿ ಯಿಂದ ಬಳ್ಳಾರಿಗೆ ಮದುವೆಗೆಂದು ತೆರಳುತ್ತಿದ್ದರು. ಈ ವೇಳೆ ಹುಳಿಯಾರು ಗೇಟ್ ಬಳಿ ಬಳಿ ಕಾರಿಗೆ ಲಾರಿ ಅಪ್ಪಳಿಸಿದೆ.
ದಂಪತಿಗೆ ಮದುವೆಯಾಗಿ ಕೇವಲ 2 ತಿಂಗಳಾಗಿತ್ತು. ಇದೀಗ ಈ ದುರಂತ ಕಂಡು ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1