ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿವಿಶೇಷ ಕಾರ್ಯಚರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ. ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್ಇಡಿ ಲೈಟ್ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ.
ಈ ಕುರಿತು ಸಂಚಾರ ಮತ್ತು ರಸ್ತೆ ಸುರಕ್ಷತೆ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಾದ ಅಲೋಕ್ ಕುಮಾರ್ ಅವರು ಸುತ್ತೋಲೆ ಹೊರಡಿಸಿದ್ದು, ರಸ್ತೆ ಅಪಘಾತ ತಡೆಗಟ್ಟಲು ವಿಶೇಷ ಕಾರ್ಯಚರಣೆ ನಡೆಸುವಂತೆ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ, ಫುಟ್ಬಾತ್ ಮೇಲೆ ವಾಹನ ಚಾಲನೆ ಬಗ್ಗೆ ವಿಶೇಷ ಕಾರ್ಯಚರಣೆ ಮಾಡುವುದು, ಇದರ ಜೊತೆಗೆ ಡಿಫೆಕ್ಟಿವ್ ನಂಬರ್ ಪ್ಲೇಟ್ ಮೇಲೆ ಸಹ ಆಗಸ್ಟ್ 1ರಿಂದ ವಿಶೇಷ ಕಾರ್ಯಚರಣೆ ನಡೆಸಲು ಎಲ್ಲಾ ಘಟಕಗಳಲ್ಲಿ ಕ್ರಮ ತೆಗೆದುಕೊಳ್ಳಲು ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವುದು ಜೀವಕ್ಕೆ ಅಪಾಯಕಾರಿಯಾಗಿದ್ದು, ಇಂತಹ ಹೆದ್ದಾರಿಗಳ ಮೇಲೆ ವಿರುದ್ಧ ದಿಕ್ಕಿನಲ್ಲಿ ವಾಹನ ಚಾಲನೆ ಮಾಡುವವರ ಮೇಲೆ ಬಿಎನ್ಎಸ್ 281 ಅಡಿಯಲ್ಲಿ ಮತ್ತು 184 ಐಎಂವಿ ಕಾಯ್ದೆಯಡಿ ಹಾಗೂ ಎಫ್ಐಆರ್ ದಾಖಲು ಮಾಡಲು ಕ್ರಮ ಜರುಗಿಸಬೇಕೆಂದು ಖಡಕ್ ಸೂಚನೆ ರವಾನಿಸಿದ್ದಾರೆ.
ಆಗಸ್ಟ್ 1ರಿಂದ ಈ ವಿಶೇಷ ಕಾರ್ಯಚರಣೆ ನಡೆಸಬೇಕು. ಇದರ ಜೊತೆ ಜನರಲ್ಲಿ ಮುಂಚಿತವಾಗಿ ಸಾಮಾಜಿಕ ಜಾಲತಾಣಗಳಲ್ಲಿ, ಕರಪತ್ರ, ಧ್ವನಿ ವರ್ದಕ ಉಪಕರಣಗಳ ಮೂಲಕ ಈ ಬಗ್ಗೆ ತಿಳುವಳಿಕೆ ನೀಡಬೇಕೆಂದು ಹೇಳಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


