ಅಹಮದಾಬಾದ್: ಕಾರು ಟ್ರೇಲರ್ ಟ್ರಕ್ ಗೆ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 10 ಜನರು ಸಾವನ್ನಪ್ಪಿದ್ದರೆ, ಕೆಲವರು ಗಾಯಗೊಂಡಿರುವ ಘಟನೆ ಅಹಮದಾಬಾದ್-ವಡೋದರಾ ಎಕ್ಸ್ ಪ್ರೆಸ್ ವೇಯಲ್ಲಿ ನಡೆದಿದೆ.
ವಡೋದರಾದಿಂದ ಅಹಮದಾಬಾದ್ ಗೆ ತೆರಳುತ್ತಿದ್ದ ಕಾರು ಟ್ರೈಲರ್ ಟ್ರಕ್’ನ ಹಿಂದೆ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಪರಿಣಾಮ ಈ ಘಟನೆ ಸಂಭವಿಸಿದೆ. ಕಾರಿನಲ್ಲಿದ್ದ ಎಲ್ಲಾ 10 ಜನರು ಅಪಘಾತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ಅವರಲ್ಲಿ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟರೆ, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ ಗಾಯಗೊಂಡ ಇನ್ನೋರ್ವ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296