ಹಿರಿಯೂರು: ಇತ್ತೀಚಿನ ದಿನಗಳಲ್ಲಿ ಕರ್ನಾಟಕ ರಾಜ್ಯದಾದ್ಯಂತ ಆವರಿಸಿಕೊಂಡಿರುವ ಒಮಿಕ್ರಾನ್ ನಿಂದಾಗಿ ಜನ ಸಾಮಾನ್ಯರ ಜೀವನ ಚಿಂತಾಜನಕವಾಗಿದೆ ಎಂದು ವೀಕೆಂಡ್ ಕರ್ಫ್ಯೂ ನಿಂದ ಬೇಸತ್ತ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು
ಬಿಜೆಪಿ ಸರ್ಕಾರದ ಆಡಳಿತದಲ್ಲಿ ತೆಗೆದುಕೊಳ್ಳುವ ನಿರ್ಧಾರಗಳು ಜನ ಸಾಮಾನ್ಯರನ್ನು ಸಂಕಷ್ಟಕ್ಕೀಡು ಮಾಡುತ್ತಿದೆ. ದುಡಿದು ತಿನ್ನುವ ಕೈಗಳು ಇದೀಗ ಒಂದು ಹೊತ್ತಿನ ಊಟಕ್ಕೂ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದಿನನಿತ್ಯ ಕೂಲಿಯಿಂದ ಜೀವನ ಸಾಗಿಸುತ್ತಿದ್ದು ಈ ಬಿಜೆಪಿ ಸರ್ಕಾರದ ದುರಾಡಳಿತದ ವ್ಯವಸ್ಥೆಯಿಂದ ಬೀದಿ ವ್ಯಾಪಾರಿಗಳು ಒಂದು ಹೊತ್ತು ಊಟಕ್ಕೂ ಸಹ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ ಎನ್ನುವ ಆಕ್ರೋಶ ಕೇಳಿ ಬಂದಿದೆ.
ಸರ್ಕಾರವು ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ ಪರಿಣಾಮ ಕೂಲಿ ನಾಲಿ ಮಾಡಿ, ಜೀವನ ಸಾಗಿಸುತ್ತಿರುವ ಕುಟುಂಬಗಳು ಬೀದಿ ಪಾಲಾಗುತ್ತಿದೆ. ಈ ಬಗ್ಗೆ ಸರ್ಕಾರಕ್ಕೆ ಯಾವುದೇ ಪಶ್ಚಾತಾಪ ಇಲ್ಲದಂತೆ ವರ್ತಿಸುತ್ತಿದೆ ಎಂದು ಸಾರ್ವಜನಿಕರು ಸರ್ಕಾರಕ್ಕೆ ಹಿಡಿಶಾಪ ಹಾಕುತ್ತಿದ್ದಾರೆ .
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy