ಬೆಂಗಳೂರಿನಲ್ಲಿ ರಸ್ತೆಯಲ್ಲಿ ಕಸ ಹಾಕುವವರ ವಿರುದ್ಧ ಕೇಸ್ ದಾಖಲಿಸಲಾಗುವುದು ಎಂದು ಡಿಸಿಎಂ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವರು ಕಸ ಸಂಗ್ರಹಿಸುವವರ ಬಳಿ ಹೋಗದೇ ರಸ್ತೆಯಲ್ಲಿ ಕಸ ಬಿಸಾಡುತ್ತಿದ್ದಾರೆ. ಇದನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಅಂತಹವರನ್ನು ಗುರುತಿಸಿ ನೋಟಿಸ್ ಕೊಡುವುದು ಕೇಸ್ ಹಾಕುವ ಕೆಲಸ ಮಾಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಕಸ ರಸ್ತೆಯಲ್ಲಿ ಹಾಕುವುದನ್ನು ತಡೆಯಲು ಹೊಸ ಯೋಜನೆ ಜಾರಿಗೆ ತರಲಾಗುತ್ತಿದೆ. ನಗರದ ಎಲ್ಲಾ ರಸ್ತೆಗಳಲ್ಲಿ ಸಿಸಿಟಿವಿ ಜೊತೆ ಎಲ್ ಇಡಿ ಬಲ್ಪ್ ಹಾಕಲಾಗುವುದು. ಇದರಿಂದ ಕಸ ಹಾಕುವವರ ಮುಖ ಸ್ಪಷ್ಟವಾಗಿ ಗೊತ್ತಾಗುವಂತೆ ಮಾಡಲಾಗುವುದು ಎಂದು ಅವರು ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


