nammatumakuru

    Subscribe to Updates

    Get the latest creative news from FooBar about art, design and business.

    What's Hot

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026
    Facebook Twitter Instagram
    ಟ್ರೆಂಡಿಂಗ್
    • ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ
    • ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ
    • ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ
    • ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು
    • ಸರಗೂರು: ತಾಲೂಕು ಮಾನವ ಹಕ್ಕುಗಳ ಮಿಷನ್ ಅಧ್ಯಕ್ಷರಾಗಿ ಪಿ. ಚಿನ್ನಣ್ಣ ಹಳೆಯೂರು ಸರ್ವಾನುಮತದಿಂದ ಆಯ್ಕೆ
    • ವಿಕಲಚೇತನರು ದ್ವಿಚಕ್ರ ವಾಹನ ಪಡೆದರೆ ಚಾಲನಾ ಪರವಾನಗಿ ಕಡ್ಡಾಯ: ಶಾಸಕ ಅನಿಲ್ ಚಿಕ್ಕಮಾದು
    • ಅರ್ಹ ಫಲಾನುಭವಿಗಳಿಗೆ ಸಾಗುವಾಳಿ ಪತ್ರ ತಲುಪಿಸುವುದು ಸರ್ಕಾರದ ಬದ್ಧತೆ: ಶಾಸಕ ಅನಿಲ್ ಚಿಕ್ಕಮಾದು
    • ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ
    ತುಮಕೂರು June 30, 2026

    ನಮ್ಮ ತುಮಕೂರು ಫಲಶ್ರುತಿ: ಕಾರ್ಮಿಕರಿಂದ ಶೌಚಗುಂಡಿ ಸ್ವಚ್ಛಗೊಳಿಸಿದ ಪ್ರಕರಣ: ಸಫಾಯಿ ಕರ್ಮಚಾರಿಗಳ ಆಯೋಗ ಸ್ಥಳಕ್ಕೆ ಭೇಟಿ

    By adminJune 30, 2026No Comments2 Mins Read
    tumakuru.jpg

    ತುಮಕೂರು: ತುಮಕೂರು ನಗರದ ಕೆಇಬಿ ಸಮುದಾಯ ಭವನ ಆವರಣದಲ್ಲಿ ಕಾನೂನು ಬಾಹಿರವಾಗಿ ಶೌಚಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಬಳಸಿಕೊಂಡ ಅಮಾನವೀಯ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಸೋಮವಾರ ಘಟನಾ ಸ್ಥಳಕ್ಕೆ ಖುದ್ದು ಭೇಟಿ ನೀಡಿ ಪರಿಶೀಲಿಸಿದರು.
    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿಷೇಧಿಸಲಾಗಿದೆ.

    ಜಿಲ್ಲಾಧಿಕಾರಿಗಳು ತುಮಕೂರು ಜಿಲ್ಲೆಯಲ್ಲಿ ಯಾವುದೇ ಇಂತಹ ಪ್ರಕರಣಗಳು ನಡೆದಿಲ್ಲ ಹಾಗೂ ಸಫಾಯಿ ಕರ್ಮಚಾರಿಗಳು ಇರುವುದಿಲ್ಲವೆಂದು ವರದಿ ನೀಡಿದ್ದಾರೆ. ಆದರೂ ಇಂತಹ ಘಟನೆ ನಡೆದಿರುವುದು ದುರದೃಷ್ಟಕರ. ಘಟನೆಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಎಲ್ಲಾ ರೀತಿಯ ಕಾನೂನು ಕ್ರಮ ಜರುಗಿಸುವಂತೆ ಹಾಗೂ ಘಟನೆಯಲ್ಲಿ ನೊಂದಿರುವ ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡಲು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಅವರು ತಿಳಿಸಿದರು.

    ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ. ರಘು ಅವರು ಮಲ ಹೊರುವ ಪದ್ಧತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ಆದೇಶ ಪ್ರಕಾರ ಸಂಬಂಧಿಸಿದ ಉಪವಿಭಾಗಾಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಮಹಜರು ಮಾಡಿ ತಪ್ಪಿತಸ್ಥರ ವಿರುದ್ಧ ಪ್ರಕರಣ ದಾಖಲಿಸಬೇಕು. ಪೊಲೀಸ್ ಇಲಾಖೆಯಿಂದ ಸ್ವಯಂ ಪ್ರೇರಿತ ದೂರು ದಾಖಲಾಗಿದ್ದರೂ ಉಪವಿಭಾಗಾಧಿಕಾರಿ ಅವರು ನೀಡುವ ದೂರಿನ ಆಧಾರದ ಮೇಲೆ ಪ್ರಕರಣ ನಿಲ್ಲಲಿದ್ದು, ತಕ್ಷಣ ಕಾರ್ಯೋನ್ಮುಖರಾಗಿ ದೂರು ದಾಖಲಿಸುವಂತೆ ಉಪ ವಿಭಾಗಾಧಿಕಾರಿಗೆ ಅವರು ಸೂಚನೆ ನೀಡಿದರು.

    ಅಲ್ಲದೆ, ಪ್ರಕರಣ ಗಂಭೀರ ಸ್ವರೂಪದ್ದಾಗಿರುವುದರಿಂದ ಘಟನೆಯ ಸಂಬಂಧಿಸಿದಂತೆ ಕೈಗೊಂಡ ಕ್ರಮದ ಬಗ್ಗೆ ತಕ್ಷಣ ಆಯೋಗಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ಅವರು ಸೂಚಿಸಿದರು.

    ಕೆಇಬಿ ಸಮುದಾಯ ಭವನ ನಗರದ ಹೃದಯ ಭಾಗದಲ್ಲಿದ್ದು, ಯುಜಿಡಿ ವ್ಯವಸ್ಥೆಯ ಪಕ್ಕದಲ್ಲೇ ಪಿಟ್ ಗುಂಡಿಗಳನ್ನು ಯಾವ ಕಾರಣಕ್ಕೆ ಮಾಡಲಾಗಿದೆ? ಹಾಗೂ ಇಂತಹ ಸಮುದಾಯ ಭವನಗಳು, ಮದುವೆ ಮಂಟಪಗಳು, ಹೋಟೆಲ್ಗಳು ಇತ್ಯಾದಿ ಕಟ್ಟಡಗಳ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಅನುಮತಿ ಕೊಡುವ ಮಹಾನಗರಪಾಲಿಕೆ ಇಂತಹ ವಿಷಯಗಳಲ್ಲಿ ಗಮನ ಹರಿಸುವುದಿಲ್ಲವೇ ಎಂಬ ಇತ್ಯಾದಿ ವಿಷಯಗಳ ಬಗ್ಗೆ ಅವರು ಗಂಭೀರವಾಗಿ ಪ್ರಶ್ನಿಸಿದರು.

    ಪ್ರಕರಣದಲ್ಲಿ ಪರಿಶಿಷ್ಟ ಜಾತಿಯ ಕಾರ್ಮಿಕರನ್ನು ಬಳಸಿಕೊಂಡಿರುವುದು ಕಂಡು ಬಂದಿದ್ದು, ಉಪ ವಿಭಾಗಾಧಿಕಾರಿಗಳು ಈ ಕೂಡಲೇ ಯಾವ ಯಾವ ನಿಯಮಗಳಲ್ಲಿ ಪ್ರಾಥಮಿಕ ವರದಿಯಲ್ಲಿ ಕೇಸು ದಾಖಲಿಸಬಹುದೆಂಬ ಬಗ್ಗೆ ಗಮನಹರಿಸಿ ತಕ್ಷಣವೇ ಕಾನೂನು ಕ್ರಮ ಜರುಗಿಬೇಕು ಅಧ್ಯಕ್ಷರು ಜಿಲ್ಲಾಡಳಿತಕ್ಕೆ ಸೂಚಿಸಿದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ. ಗೋಪಾಲ್, ಮಹಾನಗರಪಾಲಿಕೆ ಆಯುಕ್ತ ಬಿ.ಶುಭ, ಅಪರ ಜಿಲ್ಲಾಧಿಕಾರಿ ಡಾ: ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಾಹಿದಾ ಜಂ ಜಂ, ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಒಬಳೇಶ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

    ನಮ್ಮ ತುಮಕೂರು ಫಲಶ್ರುತಿ:

    ತುಮಕೂರು ನಗರದ ಕೆಇಬಿ ಸಮುದಾಯ ಭವನ ಆವರಣದಲ್ಲಿ ಕಾನೂನು ಬಾಹಿರವಾಗಿ ಶೌಚಗುಂಡಿ ಸ್ವಚ್ಛಗೊಳಿಸಲು ಕಾರ್ಮಿಕರನ್ನು ಬಳಸಿಕೊಂಡ ಬಗ್ಗೆ ನಮ್ಮ ತುಮಕೂರು ವಿಶೇಷ ವರದಿಯನ್ನು ಪ್ರಕಟಿಸಿದ ಬೆನ್ನಲ್ಲೇ ಈ ಘಟನೆ ಬೆಳಕಿಗೆ ಬಂದಿದ್ದು, ಅಧಿಕಾರಿಗಳು ಎಚ್ಚೆತ್ತುಕೊಂಡು ಇದೀಗ ಕಾನೂನು ಕ್ರಮಕ್ಕೆ ಮುಂದಾಗಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


    Provided by
    Provided by
    admin
    • Website

    Related Posts

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

    July 19, 2026

    Leave A Reply Cancel Reply

    Our Picks

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Food

    ಒಂದು ಪ್ಲೇಟ್ ಟೊಮೆಟೊ ಮೊಟ್ಟೆ ಬುರ್ಜಿಗೆ ₹7,300! | ರೆಸ್ಟೋರೆಂಟ್ ವಿರುದ್ಧ ನೆಟ್ಟಿಗರ ಆಕ್ರೋಶ

    July 21, 2026

    ಟೊಮೆಟೊ ಮತ್ತು ಮೊಟ್ಟೆಯ ಸ್ಕ್ರ್ಯಾಂಬಲ್ (Tomato Scrambled Eggs) ಎನ್ನುವುದು ಚೀನಾದ ಮನೆಗಳಲ್ಲಿ ಅತ್ಯಂತ ಸುಲಭವಾಗಿ ಮತ್ತು ಅಗ್ಗವಾಗಿ ಮಾಡುವ…

    ಕೀಟನಾಶಕ ಸಿಂಪಡಿಸಿದ ಜಮೀನಿನಲ್ಲಿ ಜಾನುವಾರು ಮೇಯಿಸದಂತೆ ಕೃಷಿ ಇಲಾಖೆ ಎಚ್ಚರಿಕೆ

    July 21, 2026

    ವೃತ್ತಿ ಧರ್ಮ ಪಾಲಿಸುವವರು ನಿಜವಾದ ಪತ್ರಕರ್ತರು: ಟಿ.ಬಿ.ಜಯಚಂದ್ರ

    July 21, 2026

    ಶಿಕ್ಷಣವೇ ಸಮಾಜ ಪರಿವರ್ತನೆಯ ಪ್ರಬಲ ಅಸ್ತ್ರ: ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜು

    July 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.